ಕರ್ನಾಟಕ

ಪ್ರಧಾನಿ ಮೋದಿಗೆ ಕೃತಜ್ಞತೆ ಪತ್ರ ಬರೆದ ಯಡಿಯೂರಪ್ಪ

Pinterest LinkedIn Tumblr

modi-yaddi

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಹೈಕಮಾಂಡ್ ಆಯ್ಕೆ ಮಾಡಿರುವುದಕ್ಕಾಗಿ ಬಿಎಸ್ ಯಡಿಯೂರಪ್ಪ ಕೃತಜ್ಞತೆ ಸಲ್ಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಪಕ್ಷವನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿ ಹೊರ ಹೊಮ್ಮಿರುವ ಯಡಿಯೂರಪ್ಪ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಮತ್ತೆ ರಾಜ್ಯಾಧ್ಯಕ್ಷರನ್ನಾಗಿ ನೇಮಕಗೊಳಿಸಿದ್ದಾರೆ.

ಗಂಗಾವತಿ, ಕೊಪ್ಪಳ, ಬಾಲಗಕೋಟ, ದಾವಣಗೆರೆಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಯಡಿಯೂರಪ್ಪ ಅವರ ನೇಮಕವನ್ನು ಸ್ವಾಗತಿಸಿರುವ ಪಕ್ಷದ ಕಾರ್ಯಕತ೯ರು ವಿಜಯೋತ್ಸವ ಆಚರಿಸಿದ್ದಾರೆ.

Write A Comment