ಕರ್ನಾಟಕ

ಹುಳಿಯಾರಿನಲ್ಲಿ ಗ್ಯಾಂಗ್‌ರೇಪ್ ಶಂಕೆ : ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ

Pinterest LinkedIn Tumblr

rapeತುಮಕೂರು, ಏ.9- ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾಗಿದ್ದು, ಈ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಹುಳಿಯಾರು ಗ್ರಾಮಸ್ಥರು ಟಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.

ಶನಿವಾರ ರಾತ್ರಿ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾಗಿದ್ದು, ಈ ಸಂಬಂಧ ಒಬ್ಬನನ್ನು ಬಂಧಿಸಿ ಉಳಿದ ನಾಲ್ಕು ಮಂದಿಯ ಬಗ್ಗೆ ವಿಚಾರಣೆ ಸಾಗಿದ್ದು, ಇನ್ನುಳಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಸ್ಥಳಕ್ಕೆ ಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು ಗ್ರಾಮಸ್ಥರು ಹುಳಿಯಾರು ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು.

ಟಯರ್‌ಗಳಿಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿದರು. ಸ್ಥಳದಲ್ಲಿ ಉದ್ರಿಕ್ತ ವಾತಾವರಣ ಉಂಟಾಗಿದ್ದು, ವಾಹನ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ರಸ್ತೆಗೆ ಅಡ್ಡಲಾಗಿ ಮರದ ದಿಮ್ಮಿಗಳನ್ನಿಟ್ಟು ಹಾಗೂ ಟಯರ್‌ಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

Write A Comment