ಕರ್ನಾಟಕ

ನಾನೇನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ

Pinterest LinkedIn Tumblr

speakerಶಿವಮೊಗ್ಗ: ಭೀಕರ ಬರಗಾಲ ಎದುರಿಸುವಲ್ಲಿ ರಾಜ್ಯ ಸರಕಾರ ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ ಎಂದು ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಸರಕಾರದ ವಿರುದ್ಧ ಚಾಟಿ ಬೀಸಿದ್ದಾರೆ.
ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿ ರಾಜ್ಯ ಸರಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಬಾರಿ ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಅದನ್ನು ಸಮರ್ಪಕವಾಗಿ ನಿಭಾಯಿಸಬೇಕು. ಆದರೆ ಈ ಕೆಲಸವನ್ನು ಸರಕಾರ ಸರಿಯಾಗಿ ಮಾಡುತ್ತಿಲ್ಲವೆಂದು ಹೇಳಿದರು.

ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ನಾನೇನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಸಂಪುಟ ವಿಸ್ತರಣೆ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಮುಖ್ಯಮಂತ್ರಿ ಬಂಟರು ಅವರ ಬಳಿ ಮಾತನಾಡುತ್ತಿರುವ ಧಾಟಿಯೇ ಬೇರೆ. ಉಳಿದವರು ಹೇಳುತ್ತಿರುವುದೇ ಬೇರೆ. ಸಚಿವರನ್ನಾಗಿ ಮಾಡುವುದಾಗಿ ಅವರೇ ಹೇಳುತ್ತಿದ್ದಾರೆ ವಿನಃ ನನಗೇನು ವಸ್ತುಸ್ಥಿತಿ ಗೊತ್ತಿಲ್ಲವೆಂದು ಸ್ಪಷ್ಟ ಪಡಿಸಿದರು.

Write A Comment