ಕರ್ನಾಟಕ

ಏ.15ರಿಂದ ಬರಪೀಡಿತ ಜಿಲ್ಲೆಗಳಲ್ಲಿ ಸಿಎಂ ಟೂರ್;ಸಿದ್ದು v/s ಬಿಎಸ್ ವೈ

Pinterest LinkedIn Tumblr

karnatakaಬೆಂಗಳೂರು:ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರಿಗೆ ಟಾಂಗ್ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಿಡುವಿಲ್ಲದ ನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಿ ಏಪ್ರಿಲ್ 15ರಿಂದ ಬರಪೀಡಿತ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.15ರಂದು ಬೀದರ್, ಕಲಬುರಗಿ ಹಾಗೂ ಏ.16ರಂದು ರಾಯಚೂರು, ಯಾದಗಿರಿ ಬರಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಅಲ್ಲದೇ ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಹೇಳಿವೆ.

ರಾಜ್ಯ ಬಿಜೆಪಿಗೆ ಬಿಎಸ್ ಯಡಿಯೂರಪ್ಪ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದ ಬೆನ್ನಲ್ಲೇ, ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದೇ ತನ್ನ ಗುರಿ ಎಂದು ಹೇಳಿದ್ದರು.

ಬಿಎಸ್ ವೈ ರಾಜ್ಯ ಪ್ರವಾಸದ ಹೇಳಿಕೆ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಪಾಳಯ ತಿರುಗೇಟು ನೀಡಲು ಸಜ್ಜಾಗಿದ್ದು, ಆ ಹಿನ್ನೆಲೆಯಲ್ಲಿ ಸಿಎಂ ಬರಪೀಡಿತ ಜಿಲ್ಲಾ ಪ್ರವಾಸ ಕೈಗೊಂಡಿರುವುದಾಗಿ ವಿಶ್ಲೇಷಿಸಲಾಗುತ್ತಿದೆ.
-ಉದಯವಾಣಿ

Write A Comment