ಕರ್ನಾಟಕ

ಮುಂದಿನ ವರ್ಷದಿಂದ ಪಿಯುಸಿ-ಎಸ್ಸೆಸ್ಸೆಲ್ಸಿ ಪರೀಕ್ಷೆಗಳಿಗೆ ಆನ್‌ಲೈನ್ ಮೂಲಕ ಪ್ರಶ್ನೆ ಪತ್ರಿಕೆ ..?

Pinterest LinkedIn Tumblr

kiಬೆಂಗಳೂರು, ಏ.12- ಪಿಯುಸಿ ರಸಾಯಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಬಸವಳಿದ ರಾಜ್ಯ ಸರ್ಕಾರ ಮುಂದಿನ ವರ್ಷದಿಂದ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಗಳಿಗೆ ಆನ್‌ಲೈನ್ ಮೂಲಕ ಪ್ರಶ್ನೆ ಪತ್ರಿಕೆ ಕಳುಹಿಸುವ ಚಿಂತನೆ ನಡೆದಿದೆ. ಪಿಯುಸಿ ರಸಾಯನಶಾಸ್ತ್ರ ಮರು ಪರೀಕ್ಷೆಯ ವೇಳೆ ಪ್ರಶ್ನೆ ಪತ್ರಿಕೆ ಮತ್ರೆ ಸೋರಿಕೆಯಾಗದಂತೆ ಕಟ್ಟೆಚ್ಚರವಹಿಸಿ ಯಶಸ್ವಿಯಾದ ಕಕಕ. ಕಿಮ್ಮನೆ ರತ್ನಾಕರ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವಿವರ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆಯಲ್ಲಿನ ಲೋಪಗಳ ಕುರಿತು ಈಗ ನನಗೆ ಸಂಪೂರ್ಣ ಮಾಹಿತಿ ಸಿಕ್ಕಿದೆ. ಮುಂದಿನ ವರ್ಷದಿಂದ ಆಲ್‌ನೈಲ್ ಮೂಲಕ ಪ್ರಶ್ನೆ ಪತ್ರಿಕೆಗಳನ್ನು ಕಳುಹಿಸಿ ಪರೀಕ್ಷೆ ನಡೆಸುವ ಕುರಿತು ಗಂಭೀರ ಚಿಂತನೆ ನಡೆದಿದೆ. ಈಗಾಗಲೇ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಈ ರೀತಿಯ ಪರೀಕ್ಷೆಗಳನ್ನು ನಡೆಸುತ್ತಿದೆ. ನಮ್ಮಲ್ಲಿ ಕೆಲ ಸೌಲಭ್ಯಗಳು ವಿಟಿಯೂಗಿಂತಲೂ ಹೆಚ್ಚಿದೆ. ಇನ್ನೂ ಕೆಲ ಸೌಲಭ್ಯಗಳ ಕೊರತೆ ಇದೆ. ಎಲ್ಲವನ್ನೂ ಸಮಗ್ರವಾಗಿ ಪರಿಶೀಲಿಸಿ ಪ್ರಥಮ ಹಂತದಲ್ಲಿ ಪ್ರಾಯೋಗಿಕವಾಗಿ ಪರೀಕ್ಷೆ ನಡೆಸಲಾಗುವುದು. ಅದು ಯಶಸ್ವಿಯಾದರೆ ಆನ್‌ಲೈನ್ ಪ್ರಶ್ನೆ ಪತ್ರಿಕೆ ರವಾನಿಸುವ ಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಹೇಳಿದರು.

ಆನ್‌ಲೈನ್ ಮೂಲಕ ಪ್ರಶ್ನೆ ಪತ್ರಿಕೆ ಕಳುಹಿಸುವುದಾದರೆ ಕೆಲವು ಕಡೆ ಸೌಲಭ್ಯ ಇರುವುದಿಲ್ಲ. ಹಾಗಾಗಿ ಪರೀಕ್ಷಾ ಕೇಂದ್ರಗಳನ್ನು ಕಡಿಮೆ ಮಾಡಬೇಕು. ಆ ಸಂದರ್ಭದಲ್ಲಿ ವಿದ್ಯಾರ್ಥಿಗಳು ದೂರದಿಂದ ಬರಲು ಬಸ್ ಸೌಕರ್ಯದ ಸಮಸ್ಯೆ ಎದುರಾಗುತ್ತದೆ. ಸಮಯ ಬದಲಾವಣೆ ಮಾಡಬೇಕಾಗುತ್ತದೆ. ಸಮಯ ಬದಲಾಯಿಸಿದರೆ ಉತ್ತರ ಕರ್ನಾಟಕ ಹಾಗೂ ಇತರೆ ಭಾಗದ ವಿದ್ಯಾರ್ಥಿಗಳು ಪರೀಕ್ಷೆ ಮುಗಿದ ನಂತರ ಮನೆಗೆ ವಾಪಸ್ ತೆರಳಲು ಸಮಸ್ಯೆ ಎದುರಾಗುತ್ತದೆ ಎಂಬ ಆಕ್ಷೇಪಗಳಿವೆ. ಎಲ್ಲವನ್ನೂ ಗಮನಕ್ಕೆ ತೆಗೆದುಕೊಳ್ಳಲಾಗುವುದು. ಮುಂದಿನ ವರ್ಷದಿಂದ ಇಂಟರ್‌ನೆಂಟ್ ಸೌಲಭ್ಯ ಬಳಸಿ ಪೆರಿಫೆರಲ್ ಆನ್‌ಲೈನ್ ಪ್ರಶ್ನೆ ಪತ್ರಿಕೆ ರವಾನಿಸುವ ಕುರಿತು ಗಂಭೀರ ಚಿಂತನೆ ನಡೆದಿದೆ ಎಂದು ಸಚಿವರು ಹೇಳಿದರು.

ಇಂದು ಬೆಳಗ್ಗೆ ಪ್ರಶ್ನೆ ಪತ್ರಿಕೆ ಆಯ್ಕೆ:

ಎರಡು ಬಾರಿ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಬಹಿರಂಗಗೊಂಡ ಹಿನ್ನೆಲೆಯಲ್ಲಿ ಮೂರನೆ ಬಾರಿಗೆ ಇಂದು ನಿಗದಿಯಾಗಿದ್ದ ಮರು ಪರೀಕ್ಷೆಗೆ ಅತ್ಯಂತ ಕಟ್ಟೆಚ್ಚರ ವಹಿಸಲಾಗಿತ್ತು. ಕೊನೆ ಕ್ಷಣದವರೆಗೂ ಯಾವ ಪ್ರಶ್ನೆ ಪತ್ರಿಕೆ ನೀಡಲಾಗುತ್ತದೆ ಎಂಬ ಮಾಹಿತಿ ಬಹಿರಂಗಗೊಳಿಸರಲಿಲ್ಲ. ಇಂದು ಬೆಳಗ್ಗೆ ಪ್ರಶ್ನೆ ಪತ್ರಿಕೆಯನ್ನು ಆಯ್ಕೆ ಮಾಡಿ ಪರೀಕ್ಷಾ ಕೇಂದ್ರಗಳಿಗೆ ರವಾನಿಸಲಾಯಿತು. ಒಂದು ವೇಳೆ ನಿನ್ನೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರೆ ಅದರಿಂದ ಯಾವ ಪರಿಣಾಮವಾಗುತ್ತಿರಲಿಲ್ಲ. ನಾವು ಬದಲಿ ಪ್ರಶ್ನೆ ಪತ್ರಿಕೆ ಆಯ್ಕೆ ಮಾಡುತ್ತಿದ್ದೆವು. ಆದರೆ, ಅಧಿಕಾರಿಗಳ ಶ್ರಮದಿಂದಾಗಿ ಯiವ ಲೋಪವೂ ಆಗಿಲ್ಲ. ಪೊಲೀಸ್, ಕಂದಾಯ, ಸಾರಿಗೆ ಮತ್ತು ನಮ್ಮ ಇಲಾಖೆಯ ಅಧಿಕಾರಿಗಳ ಶ್ರಮ. ಇದಕ್ಕಾಗಿ ಪ್ರತ್ಯೇಕ ಸಮಿತಿಯನ್ನು ಮಾಡಲಾಗಿತ್ತು. ಎಸ್‌ಪಿ, ಡಿಸಿಗಳು, ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಅತ್ಯಂತ ಶ್ರದ್ಧೆಯಿಂದ ಸಹಕಾರ ಕೊಟ್ಟು ಕೆಲಸ ಮಾಡಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಖಜಾನೆಯಲ್ಲಿ ಸೋರಿಕ:

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಪ್ರಕರಣಗಳ ಬೆನ್ನುಹತ್ತಿದ ತಮಗೆ ಎಲ್ಲಿ ಲೋಪಗಳಾಗಿವೆ ಎಂಬುದು ಕಂಡು ಬಂದಿದೆ. ಬಹುರ್ತಕ ಖಜಾನೆಯಿಂದ ಪ್ರಶ್ನೆ ಪತ್ರಿಕೆ ಬಹಿರಂಗಗೊಂಡಿರುವ ಸಾಧ್ಯತೆ ಇದೆ. 136ಪರೀಕ್ಷಾ ಕೇಂದ್ರಗಳಿದ್ದು, ಅಲ್ಲಿಯೂ ಆಗಿರಬಹುದು. ನಮ್ಮ ಇಲಾಖೆಯ ಕೈ ಚಳಕವೂ ಇರಬಹುದು. ನಮಗೆ ಖಚಿತ ಮಾಹಿತಿಗಳು ಸಿಕ್ಕಿವೆ. ಮುಂದಿನ ವರ್ಷಗಳಿಂದ ಇಂತಹ ಲೋಪಗಳಿಗೆ ಅವಕಾಶ ನೀಡುವುದಿಲ್ಲ. ಸಮಗ್ರವಾಗಿ ಪರೀಕ್ಷಾ ನಿಯಮಗಳನ್ನು ಬದಲಾಯಿಸುತ್ತೇವೆ. ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗಳ ಪಾರುಪತ್ಯವನ್ನು ಕಾಪಾಡಲು ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವರು ಹೇಳಿದರು.

ಈ ಹಿಂದೆ ಆಗಿದ್ದ ಲೋಪ- ದೋಷಗಳ ಬಗ್ಗೆ ನನಗೆ ಮಾಹಿತಿ ಇಲ್ಲ. ಹೀಗಾಗಿ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ ಎಂದು ಅವರು ವಿಷಾದಿಸಿದರು.

Write A Comment