ಕರ್ನಾಟಕ

ಎಸೆಸೆಲ್ಸಿ ಪರೀಕ್ಷಾ ಕೇಂದ್ರದಲ್ಲೇ ಕಾಪಿಚೀಟಿ ಗಲಾಟೆ: ಇಬ್ಬರ ಸಾವು

Pinterest LinkedIn Tumblr

murderವಿಜಯಪುರ : ಜಿಲ್ಲೆಯ ಇಂಡಿ ತಾಲೂಕಿನ ನಿಂಬಾಳ ಗ್ರಾಮದ ಎಸೆಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಕಾಪಿ ಚೀಟಿ ನೀಡಲು ಬಂದಿದ್ದ ಎರಡು ಗುಂಪುಗಳ ನಡುವೇ ಘರ್ಷಣೆ ನಡೆದು ಇಬ್ಬರ ಹತ್ಯೆ ನಡೆದ ಅಘಾತಕಾರಿ ಘಟನೆ ಬುಧವಾರ ನಡೆದಿದೆ.

ಇಂದು ನಡೆಯುತ್ತಿದ್ದ ಹಿಂದಿ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಕಾಪಿ ಚೀಟಿ ನೀಡಲು ಬಂದಿದ್ದ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು ಈ ವೇಳೆ ನಿಂಗಪ್ಪ ಪುಟಾಣಿ (40) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದು,ಮಂಜುನಾಥ್‌ ಎಂಬಾತ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫ‌ಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಹೊರ್ತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ಕಳುಹಿಸಲಾಗಿದೆ.
-ಉದಯವಾಣಿ

Write A Comment