ಕರ್ನಾಟಕ

ಬೈರತಿ ಬಸವರಾಜು, ಬಿಬಿಎಂಪಿ ಆಯುಕ್ತ ಕುಮಾರ್ ನಾಯಕ್ ವಿರುದ್ಧ ಎಫ್‍ಐಆರ್ ದಾಖಲು

Pinterest LinkedIn Tumblr

baiಬೆಂಗಳೂರು, ಏ.13- ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ವಿರುದ್ಧವಾಗಿ ಹಾಗೂ ಕಾನೂನು ಬಾಹಿರವಾಗಿ ಪಾದಚಾರಿ ಮಾರ್ಗದಲ್ಲಿ ವಾಣಿಜ್ಯ ಮಳಿಗೆ ನಿರ್ಮಿಸಿ ಕೊಟ್ಟ ಆರೋಪದ ಹಿನ್ನೆಲೆಯಲ್ಲಿ ಶಾಸಕ ಬೈರತಿ ಬಸವರಾಜು, ಬಿಬಿಎಂಪಿ ಆಯುಕ್ತ ಕುಮಾರ್ ನಾಯಕ್ ಮತ್ತಿತರ ಅಧಿಕಾರಿಗಳ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ನ್ಯಾಯಾಲಯ ಬಿಎಂಟಿಎಫ್ ಪೊಲೀಸರಿಗೆ ಸೂಚಿಸಿದೆ. ಕೆಆರ್ ಪುರಂ ವಿಧಾನ ಸಭಾ ಕ್ಷೇತ್ರದ ಐಟಿಇ ಬಡಾವಣೆ ಹೆದ್ದಾರಿ ಸಮೀಪದ ಪಾದಚಾರಿ ಮಾರ್ಗದಲ್ಲಿ ಶಾಸಕ ಬೈರತಿ ಬಸವರಾಜು ಅವರು ತಮ್ಮ ಹಿಂಬಾಲಕರಿಗೆ ಕಾನೂನು ಬಾಹಿರವಾಗಿ ವಾಣಿಜ್ಯ ಮಳಿಗೆ ನಿರ್ಮಿಸಿ ಕೊಟ್ಟಿದ್ದಾರೆ ಎಂದು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ಅವರು ನಗರದ ನಾಲ್ಕನೆ ಎಸಿಎಂ ನ್ಯಾಯಾಲಯದ ಮುಂದೆ ದೂರು ಸಲ್ಲಿಸಿದ್ದರು.

ದೂರಿನ ವಿಚಾರಣೆ ನಡೆಸಿದ ನ್ಯಾಯಾಧೀಶರು ಶಾಸಕ ಬೈರತಿ ಬಸವರಾಜ್, ಆಯುಕ್ತ ಕುಮಾರ್ ನಾಯಕ್, ಮಹದೇವಪುರ ವಲಯದ ಜಂಟಿ ಆಯುಕ್ತ ಉಮಾನಂದರೈ , ಮುಖ್ಯ ಅಭಿಯಂತರ ಪರಮೇಶ್ವರಪ್ಪ , ಕಾರ್ಯಪಾಲಕ ಅಭಿಯಂತರ ರಂಗನಾಥ್ ಅವರ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡು ಜು.29ರೊಳಗೆ ಕೈಗೊಂಡ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.
ಪಾದಚಾರಿ ಮಾರ್ಗದಲ್ಲಿ ವಾಣಿಜ್ಯ ಮಳಿಗೆ ನಿರ್ಮಿಸಿದ ಘಟನೆಗೆ ಸಂಬಂಧಿಸಿದಂತೆ ಶಾಸಕ ಬೈರತಿ ಬಸವರಾಜ್ ಮತ್ತು ಬಿಜೆಪಿ ಬಿಬಿಎಂಪಿ ಸದಸ್ಯೆ ಪೂರ್ಣಿಮಾ ಅವರ ನಡುವೆ ಜಟಾಪಟಿ ಏರ್ಪಟ್ಟಿತ್ತು.
ಪಾಲಿಕೆ ಸಭೆಯಲ್ಲಿ ಪೂರ್ಣಿಮಾ ಅವರು ಶಾಸಕ ಬೈರತಿ ಬಸವರಾಜ್ ಅವರು ಕಾನೂನು ಉಲ್ಲಂಘಿಸಿ ತಮ್ಮ ಹಿಂಬಾಲಕರಿಗೆ ಪಾದಚಾರಿ ಮಾರ್ಗದಲ್ಲಿ ವಾಣಿಜ್ಯ ಮಳಿಗೆ ನಿರ್ಮಿಸಿದ್ದಾರೆ. ಕೂಡಲೇ ಅವುಗಳನ್ನು ತೆರವುಗೊಳಿಸುವಂತೆ ಮನವಿ ಮಾಡಿಕೊಂಡಿದ್ದರು. ಪೂರ್ಣಿಮಾ ಅವರ ಈ ನಿರ್ಧಾರದ ವಿರುದ್ಧ ಕೆ.ಆರ್.ಪುರಂನ ಕೆಲ ವ್ಯಾಪಾರಿಗಳು ಬಿಬಿಎಂಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು.

Write A Comment