ಕರ್ನಾಟಕ

ಕರ್ತವ್ಯ ಲೋಪ ಹಿನ್ನೆಲೆಯಲ್ಲಿ 3 ಗ್ರಾಮ ಲೆಕ್ಕಾಧಿಕಾರಿಗಳ ಅಮಾನತು

Pinterest LinkedIn Tumblr

saspendಪಾಂಡವಪುರ, ಏ.13- ಕಂದಾಯ ಇಲಾಖೆಯಲ್ಲಿ ಹೆಚ್ಚಳವಾಗಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಪಾಂಡವಪುರ ಉಪವಿಭಾಗಾಧಿಕಾರಿ ಡಾ.ಎಚ್.ಎಲ್.ನಾಗರಾಜು ಅವರು, ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಮೂವರು ಗ್ರಾಮಲೆಕ್ಕಿಗರನ್ನು ಅಮಾನತುಗೊಳಿಸಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಮೂಲಕ ನೌಕರರ ಭ್ರಷ್ಟಾಚಾರ ನಿಯಂತ್ರಣಕ್ಕೆ ಪ್ರಯತ್ನ ಮಾಡಿದ್ದಾರೆ. ಕೆ.ಆರ್.ಪೇಟೆ ತಾಲೂಕಿನ ಭೈರಾಪುರ ವೃತ್ತದ ಗ್ರಾಮ ಲೆಕ್ಕಿಗ ಏಜಾಜ್‍ಪಾಷ, ಮುರುವನಹಳ್ಳಿ ವೃತ್ತದ ಗ್ರಾಮ ಲೆಕ್ಕಿಗ ಟಿ.ಎಸ್.ಶ್ರೀನಿವಾಸ್ ಹಾಗೂ ಶೀಳನೆರೆ ಹೋಬಳಿಯ ಹರಳಹಳ್ಳಿ ವೃತ್ತದ ಗ್ರಾಮ ಲೆಕ್ಕಿಗ ಎನ್.ಆರ್.ರವಿಕುಮಾರ್ ಅವರುಗಳೇ ಅಮಾನತುಗೊಂಡವರು.

ಉಪವಿಭಾಗಾಧಿಕಾರಿ ಡಾ.ಎಚ್.ಎಲ್.ನಾಗರಾಜು ಅವರು ಈ ಮೂವರು ಗ್ರಾಮ ಲೆಕ್ಕಾಧಿಕಾರಿಗಳಿಗೆ ನೀಡಿರುವ ಅಮಾನತು ಶಿಕ್ಷೆಯು ಇತರೆ ಭ್ರಷ್ಟ ಗ್ರಾಮ ಲೆಕ್ಕಾಧಿಕಾರಿಗಳಿಗೆ ಎಚ್ಚರಿಕೆ ಗಂಟೆಯಾಗಿ ಪರಿಣಮಿಸಿದೆ.
ಕೆ.ಆರ್.ಪೇಟೆ ತಾಲೂಕಿನ ಈ ಮೂವರು ಗ್ರಾಮ ಲೆಕ್ಕಾಧಿಕಾರಿಗಳ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಿಷೇಧಕ್ಕೆ ಯಾವುದೇ ಕ್ರಮ ವಹಿಸದಿರುವುದು, ಈ ಗ್ರಾಮಲೆಕ್ಕಾಧಿಕಾರಿಗಳ ಮೇಲಾಧಿಕಾರಿಗಳಾದ ಕೆ.ಆರ್.ಪೇಟೆ ತಹಸೀಲ್ದಾರ್‍ರವರ ನಿರ್ದೇಶನಗಳನ್ನು ಪಾಲಿಸದಿರುವುದು ಹಾಗೂ ಮೇಲಾಧಿಕಾರಿಗಳು ಕರೆಯುವ ಯಾವುದೇ ಸಭೆಗಳಿಗೆ ಹಾಜರಾಗದಿರುವುದು, ಕಡತಗಳ ವಿಲೇವಾರಿಗೆ ನಿರ್ಲಕ್ಷ್ಯತೆ ತೋರಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಇವರುಗಳನ್ನು ಅಮಾನತ ವ್ಯಪಡಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಉಪವಿಭಾಗಾಧಿಕಾರಿ ಡಾ.ಎಚ್.ಎಲ್.ನಾಗರಾಜು ತಿಳಿಸಿದರು.

ಪಾಂಡವಪುರ ತಾಲೂಕಿನಲ್ಲಿಯೂ ತಮಗೆ ಗ್ರಾಮ ಲೆಕ್ಕಾಧಿಕಾರಿಗಳ ಕರ್ತವ್ಯಲೋಪದ ವರದಿಗಳು ಸಾಕಷ್ಟು ಕೇಳಿ ಬರುತ್ತಿವೆ. ಮುಂದಿನ ದಿನಗಳಲ್ಲಿ ಸೂಕ್ತ ಪರಿಶೀಲನೆ ನಡೆಸಿ ಅವರನ್ನೂ ಅಮಾನತ್ತುಪಡಿಸಲಾಗುವುದು ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದರು.

Write A Comment