ಕರ್ನಾಟಕ

ಲ್ಯಾಬ್ ವಿವಾದಕ್ಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ದಿಗ್ವಿಜಯ್ ಸಿಂಗ್ ನೀಡಿರುವ ಸಲಹೆ ಏನು ಗೊತ್ತಾ?

Pinterest LinkedIn Tumblr

Digvijay_Siddu

ನವದೆಹಲಿ: ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಗ್ನಾಸ್ಟಿಕ್ ಲ್ಯಾಬ್ ಸ್ಥಾಪಿಸಲು ಅನುಮತಿ ನೀಡಿರುವ ವಿವಾದಕ್ಕೆ ಸಂಬಂಧಿಸಿದಂತೆ, ನಿಮ್ಮ ಪುತ್ರ ಖಾಸಗಿ ಕಂಪನಿ ತ್ಯಜಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿರುವುದಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು ತಿಳಿಸಿದ್ದಾರೆ.

ಇದೇ ವೇಳೆ, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪುತ್ರ ಯತೀಂದ್ರ ಮಾಲೀಕತ್ವದ ಮ್ಯಾಟ್ರಿಕ್ಸ್ ಇಮೇಂಜಿಂಗ್ ಸಲ್ಯೂಷನ್ಸ್ ಕಂಪನಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಲ್ಯಾಬ್ ಆರಂಭಿಸಲು ಗುತ್ತಿಗೆ ನೀಡಿರುವ ಕುರಿತು ತನಿಖೆಗೆ ಆದೇಶಿಸುವಂತೆ ಸೂಚಿಸಲಾಗಿದೆ ಎಂಬ ವರದಿಯನ್ನು ದಿಗ್ವಿಜಯ್ ಸಿಂಗ್ ತಳ್ಳಿಹಾಕಿದರು.

ಸಿದ್ದರಾಮಯ್ಯ ಅವರ ಪುತ್ರ ಲ್ಯಾಬ್ ಗುತ್ತಿಗೆ ಪಡೆದಿರುವ ಸಂಸ್ಥೆಯಿಂದ ಹೊರಬರುವುದು ಸೂಕ್ತ. ಟೆಂಡರ್ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿದೆ. ಸಿದ್ದರಾಮಯ್ಯ ಅವರ ಪುತ್ರನ ಸಂಸ್ಥೆ ಕಡಿಮೆ ಮೊತ್ತಕ್ಕೆ ಬಿಡ್ ಮಾಡಿತ್ತು. ಹಾಗಾಗಿ ಆ ಸಂಸ್ಥೆಗೆ ಟೆಂಡರ್ ನೀಡಲಾಗಿದೆ. ಆದರೂ ನಾನು ಸಿದ್ದರಾಮಯ್ಯ ಅವರ ಪುತ್ರ ಸಂಸ್ಥೆಯನ್ನು ತ್ಯಜಿಸುವಂತೆ ಸಲಹೆ ನೀಡಿದ್ದೇನೆ ಎಂದು ದಿಗ್ವಿಜಯ್ ಸಿಂಗ್ ತಿಳಿಸಿದ್ದಾರೆ.

ಸಿಎಂ ಹಾಗೂ ಸಚಿವ ಸಂಪುಟದ ಸದಸ್ಯರ ಕುಟುಂಬ ಸರ್ಕಾರದೊಂದಿಗೆ ಯಾವುದೇ ಉದ್ಯಮದಲ್ಲಿ ಪಾಲ್ಗೊಳ್ಳುವುದಾಗಲಿ ಅಥವಾ ಸರ್ಕಾರಕ್ಕೆ ಯಾವುದೇ ಸೇವೆ ಒದಗಿಸುವಂತಿಲ್ಲ ಎಂಬ ನೀತಿ ಸಂಹಿತೆ ಇದೆ. ಆದರೆ ನಿಯಮ ಮೀರಿ ಸಿಎಂ ಪುತ್ರನ ಸಂಸ್ಥೆಗೆ ಡಯಾಗ್ನೋಸ್ಟಿಕ್ ಘಟಕ ತೆರೆಯಲು ಅನುಮತಿ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಕಂಪನಿಯಿಂದ ಹೊರ ಬಂದಿದ್ದಾರೆ.

Write A Comment