ಕರ್ನಾಟಕ

ಸಂಶೋಧನಾ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಹೆಚ್ಚಳ : ಎಚ್.ಆಂಜನೇಯ

Pinterest LinkedIn Tumblr

anಬೆಂಗಳೂರು,ಏ.17-ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂಶೋಧನಾ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಹೆಚ್ಚಿಸುವುದಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗದ ಕಲ್ಯಾಣ ಸಚಿವ ಎಚ್.ಆಂಜನೇಯ ಹೇಳಿದರು. ಬೆಂಗಳೂರು ವಿವ ಆವರಣದಲ್ಲಿ ನಿರ್ಮಿಸಲಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸ್ಪರ್ಧಾತ್ಮಕ ಪರೀಕ್ಷಾಪೂರ್ವ ತರಬೇತಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಿಂದುಳಿದ ವರ್ಗಗಳ ಸಂಶೋಧನಾ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಿದ್ಯಾರ್ಥಿ ವೇತನ ಹೆಚ್ಚಿಸುವಂತೆ ಕುಲಪತಿ ತಿಮ್ಮೇಗೌಡರು ಮನವಿ ಮಾಡಿದ್ದಾರೆ. ಇದರ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇನೆ. ಜತೆಗೆ ಈಗಾಗಲೇ ವಿವಿಯ ವಿದ್ಯಾರ್ಥಿಗಳಿಗೆ ಹಾಸ್ಟಲ್ ನಿರ್ಮಿಸಲು 20 ಕೋಟಿ ಅನುದಾನ ನೀಡಿರುವುದಾಗಿ ತಿಳಿಸಿದರು.

ಸಮಾಜದಲ್ಲಿ ಅನ್ಯಾಯಕ್ಕೊಳಗಾಗಿರುವ ಬಡವರಿಗೆ, ಶೋಷಿತ ವರ್ಗದವರಿಗೆ ಸಮಾನ ಹಕ್ಕುಗಳು ಲಭ್ಯವಾದಾಗ ಮಾತ್ರ ಅಂಬೇಡ್ಕರ್ ಅವರ ಕನಸು ನನಸಾಗುತ್ತದೆ ಮತ್ತು ಅದೇ ನಮಗೆ ಸಿಗುವ ನಿಜವಾದ ಸ್ವಾತಂತ್ರ್ಯವಾಗಬೇಕು, ಇಂದು ನಾವೆಲ್ಲರೂ ಉತ್ತಮ ಸೌಲಭ್ಯ ಪಡೆದು ವಿದ್ಯಾಭ್ಯಾಸ ಮಾಡುತ್ತಿದ್ದಾರೆಂದರೆ ಅದು ಅಂಬ್ಕೇರ್ ಅವರ ಹೋರಾಟದ ಫಲ ಎಂದರು. ಸಾಹಿತ್ಯ ಕ್ಷೇತ್ರದಲ್ಲಿ ಡಾ.ಸಿದ್ದಲಿಂಗಯ್ಯ ತಮ್ಮದೇ ಆದ ಛಾಪು ಮೂಡಿಸಿದ್ದು , ಆಧುನಿಕ ಅಂಬೇಡ್ಕರ್ ಆಗಿ ಹೊರಹೊಮ್ಮಿದ್ದಾರೆ. ಅವರ ಆದರ್ಶ ನಮ್ಮೆಲ್ಲರಿಗೂ ಮಾದರಿ ಎಂದು ಶ್ಲಾಘಿಸಿದರು.

ವಿವಿ ಕುಲಪತಿ ಡಾ.ಬಿ.ತಿಮ್ಮೇಗೌಡ ಮಾತನಾಡಿ, ಪರಿಶಿಷ್ಟ ಜಾತಿ, ಪಂಗಡಗಳ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಫೆಲೋಶಿಪ್ ಮೊತ್ತವನ್ನು ಸದ್ಯ ಎಂಟು ಸಾವಿರ ರೂ.ಗಳಿಗೆ ಏರಿಕೆ ಮಾಡುತ್ತೇವೆ. ಈಗಾಗಲೇ ಈ ವರ್ಗದ 200 ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್ ನೀಡಿದ್ದು, ಒಂದು ತಿಂಗಳಲ್ಲಿ ಇನ್ನು 100 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಮಾಡುವುದಾಗಿ ತಿಳಿಸಿದರು. ವಿವಿ ವಿದ್ಯಾರ್ಥಿಗಳಿಗಾಗಿ 4 ವಿದ್ಯಾರ್ಥಿ ನಿಲಯ ಸ್ಥಾಪಿಸುವ ಯೋಜನೆ ರೂಪಿಸಿದ್ದು, ಕೆಲವೇ ದಿನಗಳಲ್ಲಿ ಅದರ ಶಂಕುಸ್ಥಾಪನೆ ಸಹ ನೆರವೇರಿಲಿದ್ದು, ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದಲ್ಲಿ ಗ್ರಂಥಾಲಯ ಮತ್ತು ಕಂಪ್ಯೂಟರ್ ಲ್ಯಾಬ್ ನಿರ್ಮಿಸಲು ಅನುದಾನ ನೀಡುವಂತೆ ಸಚಿವರಿಗೆ ಮನವಿ ಮಾಡಿದರು.

Write A Comment