ಕರ್ನಾಟಕ

ಮಾನಸಿಕ ಖಿನ್ನತೆ: ಅಪಾರ್ಟ್‌ಮೆಂಟ್‌ನ 9ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು

Pinterest LinkedIn Tumblr

suicideಬೆಂಗಳೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮುಂಬೈ ಮೂಲದ ಟೆಕ್ಕಿ ಅಂಕಿತ ಸೋನಿ ಎಂಬುವರು ಅಪಾರ್ಟ್‌ಮೆಂಟ್‌ನ 9ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಳಗ್ಗೆ 6 ಗಂಟೆ ಸುಮಾರಿಗೆ ಬೆಂಗಳೂರಿನ ಮಾರತಹಳ್ಳಿ ಬಳಿಯ ಪೂರ್ವ ಫೌಂಟೈನ್ ಸ್ಕೈರ್ ಅಪಾರ್ಟ್‌ಮೆಂಟ್‌ನ 9ನೇ ಮಹಡಿಯಿಂದ ಅಂಕಿತ ಸೋನಿ ಕೆಳಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೊಲಂಬಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಂಕಿತ ಸಾವನ್ನಪ್ಪಿದ್ದಾರೆ. ಸದ್ಯ ಸೋನಿ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಇಡಲಾಗಿದೆ.
ಡೆಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಂಕಿತ ಸೋನಿ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಕಳೆದ ರಾತ್ರಿ ಸೋನಿ ಅವರು ತನ್ನ ಸ್ನೇಹಿತೆ ಮನೆಯಲ್ಲಿ ತಂಗಿದ್ದು ಬೆಳಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹೆಚ್ ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Write A Comment