ಕರ್ನಾಟಕ

ಗದಗ: ಕಾರಿಗೆ ಸರ್ಕಾರಿ ಬಸ್ ಡಿಕ್ಕಿ, 10 ಮಂದಿ ಸಾವು

Pinterest LinkedIn Tumblr

gadag accident

ಗದಗ: ಸರ್ಕಾರಿ ಬಸ್ಸೊಂದು ಓಮ್ನಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಂ ಕಾರಿನಲ್ಲಿದ್ದ 10 ಮಂದಿ ಸಾವನ್ನಪ್ಪಿದ್ದ ಧಾರುಣ ಘಟನೆ ಗದಗ ತಾಲೂಕಿನ ಹರ್ಲಾಪುರ ಬಳಿ ನಡೆದಿದೆ.

ಗದಗದಿಂದ ಕೊಪ್ಪಳಕ್ಕೆ ಹೊರಟಿದ್ದ ಸರ್ಕಾರಿ ಬಸ್ ಮತ್ತು ಹೊಸಪೇಟೆಯಿಂದ ಗದಗಕ್ಕೆ ಬರುತ್ತಿದ್ದ ಓಮ್ನಿ ಕಾರು ನಡುವೆ ಈ ಅಪಘಾತ ನಡೆದಿದೆ. 1 ಮಗು, 6 ಮಹಿಳೆಯರು ಸೇರಿ 10 ಮಂದಿ ಮೃತಪಟ್ಟಿದ್ದು, ಮೃತಪಟ್ಟವರೆಲ್ಲ ಒಂದೇ ಕುಟುಂಬದವರಾಗಿದ್ದಾರೆ ಎಂದು ತಿಳಿದು ಬಂದಿದೆ.

ಬಸ್ಸಿನಲ್ಲಿದ್ದ 4 ಮಂದಿ ಗಂಭೀರ ಗಾಯಗೊಂಡಿದ್ದು ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಬಳಿಕ ಬಸ್ ಚಾಲಕ ಮತ್ತು ನಿರ್ವಾಹಕ ಪರಾರಿಯಾಗಿದ್ದಾರೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Write A Comment