ಕರ್ನಾಟಕ

ಗದಗ ಬಳಿ ಕೆಎಸ್‌ಆರ್‌ಟಿಸಿ ಬಸ್–ಒಮ್ನಿ ಡಿಕ್ಕಿ: 11 ಸಾವು

Pinterest LinkedIn Tumblr

82jeix8v_0ಗದಗ: ಜಿಲ್ಲೆಯ ಹರ್ಲಾಪುರ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಒಮ್ನಿ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲಿಯೇ 10 ಮಂದಿ ಮೃತಪಟ್ಟು, ಮಗುವೊಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ದುರ್ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಮೃತಪಟ್ಟವರು ಗದಗಿನ ಪಂಚಾಕ್ಷರಿ ನಗರದ ಎಲಿ ಕುಟುಂಬದವರು. ಈ ಎಲ್ಲರೂ ಕೊಪ್ಪಳ ಜಿಲ್ಲೆಯ ಯಲಬುರ್ಗದಲ್ಲಿ ಸಂಬಂಧಿಕರ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಹುಬ್ಬಳ್ಳಿಯಿಂದ ಹೊಸಪೇಟೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಕೊಪ್ಪಳ ಜಿಲ್ಲೆ ಯಲಬುರ್ಗದಿಂದ ಬರುತ್ತಿದ್ದ ಒಮ್ನಿ ಮಧ್ಯೆ ಹರ್ಲಾಪುರ ಗೇಟ್ ಬಳಿ ಡಿಕ್ಕಿ ಸಂಭವಿಸಿದೆ. ಆರು ಮಂದಿ ಹೆಣ್ಣುಮಕ್ಕಳು, ನಾಲ್ವರು ಗಂಡುಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರ ಗಾಯಗೊಂಡಿದ್ದ ಮಗು ಜಿಲ್ಲಾ ಆಸ್ಪತ್ರೆಯಲ್ಲಿ ಸಾವಿಗೀಡಾಗಿದೆ.
ಮೂರು ಶವಗಳು ಬಸ್ ಅಡಿ ಸಿಲುಕಿವೆ. ಶವಗಳನ್ನು ಹೊರ ತೆಗೆಯುವ ಕಾರ್ಯ ನಡೆಯುತ್ತಿದೆ.

Write A Comment