ಕರ್ನಾಟಕ

ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ : ತಂದೆ-ಮಗ ಧಾರುಣವಾಗಿ ಸಾವು

Pinterest LinkedIn Tumblr

acciಕನಕಪುರ, ಏ.17- ಗೂಡ್ಸ್ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ತಂದೆ ಮತ್ತು ಮಗ ಧಾರುಣವಾಗಿ ಮೃತಪಟ್ಟಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅರಳಾಳು ಮಹದೇಶ್ವರಸ್ವಾಮಿ ದೇವಾಲಯದ ಬಳಿ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ತಾಲ್ಲೂಕಿನ ತಗಡೇಗೌಡನದೊಡ್ಡಿಯ ಜಗದೀಶ್ ಉರುಫ್ ಅಂಗಡಿ ಆಚಾರ್ (45) ಮತ್ತವರ ಮಗ ಸಚಿನ್ (20) ಮೃತಪಟ್ಟ ದುರ್ದ್ಯೆವಿಗಳಾಗಿದ್ದಾರೆ.

ನಿನ್ನೆ ಬೆಳಗ್ಗಕೆ ತಾವು ಹೊಸದಾಗಿ ಖರೀದಿಸಿದ್ದ ಹೋಂಡಾ ಬೈಕನ್ನು ಬೆಂಗಳೂರಿನಿಂದ ತೆಗೆದುಕೊಂಡು ದೇವರಿಗೆ ಪೂಜೆ ಸಲ್ಲಿಸಲು ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕನಕಪುರದಿಂದ ಕೋಡಿಹಳ್ಳಿ ರಸ್ತೆಯಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದು ಟಾಟಾ ಮ್ಯಾಜಿಕ್ ವಾಹನ ಡಿಕ್ಕಿ ಹೊಡೆದಿದೆ. ಬೈಕ್ ಓಡಿಸುತ್ತಿದ್ದ ಜಗದೀಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ, ಅವರ ಮಗ ಸಚಿನ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಸ್ಥಳಕ್ಕೆ ಸರ್ಕಲ್ ಇನ್ಸ್‌ಪೆಕ್ಟರ್ ಸಿದ್ದೇಗೌಡ, ಸಂಚಾರಿ ಸಬ್‌ಇನ್ಸ್‌ಪೆಕ್ಟರ್ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Write A Comment