ಕೃಷ್ಣಗಿರಿ,ಏ.18-ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶೂಲಗಿರಿಯಲ್ಲಿ ಸಂಭವಿಸಿದೆ.
ಮೃತರನ್ನು ತಮಿಳುನಾಡಿನ ವೇಲೂರಿನ ನಿವಾಸಿಗಳಾದ ಮುರುಳಿ(42), ಗೀತಾ(42), ಶಂಕರ(53), ಕೇಶವ ಚಂದ್ರಸೇನ(53), ಅನುಜ (38) ಮೃತರು. ಬೆಂಗಳೂರಿನಲ್ಲಿ ನಡೆದ ಮದುವೆಯೊಂದರಲ್ಲಿ ಪಾಲ್ಗೊಂಡು ವಾಪಸ್ ತಮ್ಮ ಊರಿಗೆ ಹೋಗುತ್ತಿದ್ದಾಗ ಇಂದು ಮುಂಜಾನೆ ಈ ದುರ್ಘಟನೆ ಸಂಭವಿಸಿದೆ.
ಹೊಸೂರು ಸರ್ಕಾರಿ ಆಸ್ಪತ್ರೆಗೆ ಶವಗಳನ್ನಿರಿಸಲಾಗಿದ್ದು, ಗಾಯಾಳು ಹತ್ತಿರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.