ಕರ್ನಾಟಕ

ಪರಿಸ್ಥಿತಿ ನಿಭಾಯಿಸಲು ಬಲ ಪ್ರಯೋಗ : ಪೊಲೀಸರ ಕ್ರಮ ಸಮರ್ಥಿಸಿಕೊಂಡ ಪರಮೇಶ್ವರ್

Pinterest LinkedIn Tumblr

balaಬೆಂಗಳೂರು, ಏ.20- ಪೂರ್ವ ಮುನ್ಸೂಚನೆ ಇಲ್ಲದೆ ಕಾರ್ಮಿಕರು ಬೀದಿಗಿಳಿದು ನಗರದ ವಿವಿಧೆಡೆ ಪ್ರತಿಭಟನೆ ನಡೆಸಿದ್ದರಿಂದ ಪರಿಸ್ಥಿತಿ ನಿಯಂತ್ರಿಸಲಾಗದೆ ಹಲವು ಅನಾಹುತಗಳು ಸಂಭವಿಸಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ನಿನ್ನೆ ನಡೆದ ಘಟನೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅಗ್ನಿ ಶಾಮಕ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿಗಳಿಗೆ ಮುಖ್ಯಮಂತ್ರಿಗಳ ಚಿನ್ನದ ಹಾಗೂ ಬೆಳ್ಳಿ ಪದಕ ವಿತರಣೆ ಸಮರಂಭದಲ್ಲಿ ಮಾತನಾಡಿದ ಅವರು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಸಮರ್ಪಕವಾಗಿ ಕೆಲಸ ಮಾಡಿದ್ದಾರೆ. ಇದರಲ್ಲಿ ಯಾವುದೇ ಲೋಪವಿಲ್ಲ ಎಂದು ಸ್ಪಷ್ಟಪಡಿಸಿದರು.

ಸಾರ್ವಜನಿಕರ ಆಸ್ತಿ ಪಾಸ್ತಿ ರಕ್ಷಣೆಗಾಗಿ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಏಕಾಏಕಿ ಕಾರ್ಮಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಇದರಲ್ಲಿ ಮಹಿಳೆಯರ ಸಂಖ್ಯೆಯೇ ಹೆಚ್ಚಾಗಿದ್ದರಿಂದ ಪೊಲೀಸರು ಎಚ್ಚರ ವಹಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟವಾಗಿದೆ. ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆ ಸಮೀಪ ಪ್ರತಿಭಟನಾಕಾರರು ಬೆಂಕಿ ಹಚ್ಚಿದಾಗ ಪಕ್ಕದಲ್ಲೇ ಗ್ಯಾಸ್ ಸಿಲಿಂಡರ್ಗಳಿದ್ದು, ಪೊಲೀಸರು ಎಚ್ಚರ ತಪ್ಪಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ಇದನ್ನು ನಿಯಂತ್ರಿಸುವ ಸಲುವಾಗಿ ಫೈರಿಂಗ್ ಮಾಡಿದ್ದಾರೆ. ಈ ವೇಳೆ ಇಬ್ಬರಿಗೆ ಗಾಯಗಳಾಗಿವೆ. ಪ್ರತಿಭಟನೆಗೆ ಕಾರ್ಖಾನೆ ಮಾಲೀಕರು ಪೊ್ರೀತ್ಸಾಹ ನೀಡಿದ್ದಾರೆ ಎಂಬ ಮಾಹಿತಿ ಇದೆ. ಇದರ ಬಗ್ಗೆ ಕೂಲಂಕಶವಾಗಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಮಾಧ್ಯಮದವರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ದೂರುಗಳು ಬಂದಿದ್ದು, ಮಾಧ್ಯಮದವರನ್ನು ಎಂದಿಗೂ ನಾವು ನಿರ್ಲಕ್ಷಿಸಿಲ್ಲ. ಸ್ವತಃ ಮಾಧ್ಯಮದವರ ಬಳಿ ನಾನೇ ಕ್ಷಮೆ ಕೇಳುತ್ತೇನೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ನಿನ್ನೆಯ ಘಟನೆ 40 ಪ್ರಕರಣ ದಾಖಲು
ನಿನ್ನೆ ಗಾರ್ಮೆಂಟ್ಸ್ ನೌಕರರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಉಂಟಾದ ಅಹಿತಕರ ಘಟನೆ ಸಂಬಂಧ ನಗರದಾದ್ಯಂತ ಒಟ್ಟು 40 ಪ್ರಕರಣಗಳನ್ನು ದಾಖಲು ಮಾಡಿಕೊಳ್ಳಲಾಗಿದೆ. 116ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದ್ದು , ಬಂಧನದ ಪ್ರಕ್ರಿಯೆ ಇಂದು ಕೂಡ ಮುಂದುವರೆದಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತರು ಈ ಸಂಜೆಗೆ ತಿಳಿಸಿದ್ದಾರೆ. ನಮ್ಮ ವಲಯದಲ್ಲಿ ಈ ವರೆಗೆ 22 ಪ್ರಕರಣಗಳನ್ನು ದಾಖಲು ಮಾಡಿಕೊಂಡು 60ಕ್ಕೂ ಹೆಚ್ಚು ಜನರನ್ನು ಬಂಲಾಗಿದೆ ಎಂದು ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಕಮೀಷನರ್ ಚರಣ್ ರೆಡ್ಡಿ ತಿಳಿಸಿದ್ದಾರೆ. 18 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು , 55ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಬಂಧನದ ಕಾರ್ಯ ಮುಂದುವರೆದಿದೆ ಎಂದು ಪೂರ್ವ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ಹರಿಶೇಖರನ್ ತಿಳಿಸಿದ್ದಾರೆ.

Write A Comment