ಕರ್ನಾಟಕ

ಇಂದು ಡಾ. ರಾಜ್‌ಕುಮಾರ್ ಅವರ 88ನೇ ಜನ್ಮ ದಿನಾಚರಣೆ

Pinterest LinkedIn Tumblr

Dr.Raj-photoಬೆಂಗಳೂರು, ಎ.೨೩: ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ದಿವಂಗತ ಡಾ. ರಾಜ್‌ಕುಮಾರ್ ಅವರ ಜನ್ಮ ದಿನದ ಅಂಗವಾಗಿ ಎಪ್ರಿಲ್ 24ರಂದು ಸಂಜೆ ೬ ಗಂಟೆಗೆ ಬೆಂಗಳೂರಿನ ಜೆ. ಸಿ. ರಸ್ತೆಯಲ್ಲಿನ ರವೀಂದ್ರ ಕಲಾಮಂದಿರದಲ್ಲಿ ಜನ್ಮ ದಿನಾಚರಣೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಸಮಾರಂಭದ ಉದ್ಫಾಟನೆಯನ್ನು ರಾಜ್ಯ ಮೂಲಭೂತ ಸೌಲಭ್ಯ ಅಭಿವೃದ್ಧಿ, ವಾರ್ತಾ ಹಾಗೂ ಹಜ್ ಖಾತೆ ಸಚಿವ ಆರ್. ರೋಷನ್ ಬೇಗ್ ನೆರವೇರಿಸುವರು. ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್, ವಿಧಾನ ಪರಿಷತ್ ಸಭಾಪತಿ ಡಿ. ಹೆಚ್. ಶಂಕರಮೂರ್ತಿ, ರಾಜ್ಯ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಉಪಸ್ಥಿತರಿರುವರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರು ಅಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಕೆ.ಜೆ. ಜಾರ್ಜ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ. ಎಸ್. ಈಶ್ವರಪ್ಪ, ಉಪಸಭಾಪತಿ ಮರೀತಿಬ್ಬೇಗೌಡ, ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಉಪಾಧ್ಯಕ್ಷ ಎನ್. ಎಚ್. ಶಿವಶಂಕರರೆಡ್ಡಿ, ಹಿರಿಯ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್‌ಕುಮಾರ್ ಪಾಲ್ಗೊಳ್ಳುವರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಆರ್.ವಿ. ದೇವರಾಜ್ ವಹಿಸುವರು. ಸಮಾರಂಭದಲ್ಲಿ ಕನ್ನಡ ಚಿತ್ರರಂಗದ ಪ್ರಮುಖರಾದ ಡಾ. ಶ್ರೀನಾಥ್, ವಿ. ರವಿಚಂದ್ರನ್, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕೃತಿ ಡಾ. ರಾಜ್‌ಕುಮಾರ್ ಸಮಗ್ರ ಚರಿತ್ರೆಯ ಲೇಖಕ ದೊಡ್ಡ ಹಲ್ಲೂರು ರುಕ್ಕೋಜಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಎಸ್. ವಿ. ರಾಜೇಂದ್ರಸಿಂಗ್ ಬಾಬು, ಕಂಠೀರವ ಸ್ಟುಡಿಯೋ ಅಧ್ಯಕ್ಷೆ ವಿಜಯಲಕ್ಷ್ಮೀ ಅರಸು ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ. ರಾ. ಗೋವಿಂದು ಅವರು ಪಾಲ್ಗೊಳ್ಳುವರು.
ಅಂದು ಸಂಜೆ ೫ ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಹಿನ್ನೆಲೆ ಗಾಯಕಿ ಡಾ. ಶಮಿತಾ ಮಲ್ನಾಡ್ ಮತ್ತು ತಂಡದವರಿಂದ ಡಾ. ರಾಜ್‌ಕುಮಾರ್ ಅವರ ಅಭಿನಯದ ಚಲನಚಿತ್ರಗಳ ಗಾಯನ ಹಾಗೂ ನೃತ್ಯ ಪ್ರದರ್ಶನ ಏರ್ಪಡಿಸಲಾಗಿದೆ.

Write A Comment