ಕರ್ನಾಟಕ

ಬಿಬಿಎಂಪಿ ನೂತನ ಆಯುಕ್ತರಾಗಿ ಐಎಎಸ್ ಅಧಿಕಾರಿ ಮಂಜುನಾಥ ಪ್ರಸಾದ್ ಅಧಿಕಾರ ಸ್ವೀಕಾರ

Pinterest LinkedIn Tumblr

bbmpಬೆಂಗಳೂರು, ಏ.23-ಬಿಬಿಎಂಪಿ ನೂತನ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಮಂಜುನಾಥ ಪ್ರಸಾದ್ ಸೋಮವಾರ ಅಧಿಕಾರ ಸ್ವೀಕರಿಸಲಿದ್ದಾರೆ. ಹಾಲಿ ಆಯುಕ್ತ ಕುಮಾರ್‌ನಾಯಕ್ ಅವರನ್ನು ಸರ್ಕಾರ ದಿಢೀರ್ ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಮಂಜುನಾಥ್ ಪ್ರಸಾದ್ ಅವರನ್ನು ನಿಯೋಜನೆ ಮಾಡಿದೆ. ಸೋಮವಾರ ಕುಮಾರ್‌ನಾಯಕ್ ಅವರು ಮಂಜುನಾಥ್ ಪ್ರಸಾದ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.

ಜಾಹೀರಾತು ಮತ್ತು ಮಾರುಕಟ್ಟೆ ವಿಭಾಗದಲ್ಲಿ ಸಹಾಯಕ ಆಯುಕ್ತರಾಗಿರುವ ಕೆ.ಮಥಾಯ್ ಅವರು ಪಾಲಿಕೆ ಜಾಹೀರಾತು ವಿಭಾಗದಲ್ಲಿ ನಡೆಯುತ್ತಿರುವ ಕೋಟ್ಯಂತರ ರೂ.ಗಳ ಅವ್ಯವಹಾರ ಕುರಿತಂತೆ ಕುಮಾರ್‌ನಾಯಕ್ ಅವರಿಗೆ ಮಧ್ಯಂತರ ವರದಿ ಸಲ್ಲಿಸಿದ್ದರು. ಅವರ ವರದಿಯಲ್ಲಿ ಹಿಂದಿನ ಆಯುಕ್ತರು ಸೇರಿದಂತೆ ಹಲವಾರು ಅಧಿಕಾರಿಗಳು ಅವ್ಯವಹಾರದಲ್ಲಿ ಶಾಮೀಲಾಗಿದ್ದಾರೆ ಎಂದು ನೇರ ಆರೋಪ ಮಾಡಿದ್ದರು. ಹೀಗಾಗಿ ಮಥಾಯ್ ಅವರ ವರದಿ ಪಾಲಿಕೆಯಲ್ಲಿ ಸಂಚಲನವನ್ನೇ ಉಂಟು ಮಾಡಿತ್ತು. ಅನುಮತಿ ಇಲ್ಲದೆ ಮಥಾಯ್ ಅವರು ವರದಿ ನೀಡಿರುವುದು ಮತ್ತು ಹಿರಿಯ ಐಎಎಸ್ ಅಧಿಕಾರಿ ಶಾಮೀಲಾಗಿದ್ದಾರೆ ಎಂದು ನೇರ ಆರೋಪ ಮಾಡಿರುವುದಕ್ಕೆ ಕುಮಾರ್‌ನಾಯಕ್ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಕುರಿತಂತೆ ಮಥಾಯ್ ಅವರಿಗೆ ಸಮಜಾಯಿಷಿ ಕೋರಿ ಶೋಕಾಸ್ ನೋಟೀಸ್ ಕೂಡ ಜಾರಿ ಮಾಡಿದ್ದರು. ಮಾತ್ರವಲ್ಲ, ಮಥಾಯ್ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಕುಮಾರ್‌ನಾಯಕ್‌ನೀಡಿದ್ದರು. ಇಂತಹ ಸಂದರ್ಭದಲ್ಲೇ ಸರ್ಕಾರ ಕುಮಾರ್‌ನಾಯಕ್ ಅವರನ್ನು ಏಕಾಏಕಿ ವರ್ಗಾವಣೆ ಮಾಡಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿದೆ.

Write A Comment