ಕರ್ನಾಟಕ

ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಮೊದಲ ಬಾರಿ ಪ್ರಧಾನಿ ಭೇಟಿ ಮಾಡಿದ ಯಡಿಯೂರಪ್ಪ

Pinterest LinkedIn Tumblr

yaddi

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಮವಾರ ಭೇಟಿ ಮಾಡಿದರು.

ಇಂದು ಸಂಸತ್ ಭವನದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಯಡಿಯೂರಪ್ಪ, ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ ನೀಡಿರುವುದಕ್ಕೆ ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸಿದರು.

ಯಡಿಯೂರಪ್ಪ ಅವರು ರಾಜ್ಯದಲ್ಲಿನ ಬರ ಪರಿಸ್ಥಿತಿಯ ಕುರಿತು ಪ್ರಧಾನಿಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕಳೆದ ಕೆಲವು ವರ್ಷಗಳಿಂದ ರಾಜ್ಯ ಬಿಜೆಪಿಯ ನಿರ್ಣಾಯಕ ಸ್ಥಾನದಿಂದ ದೂರವಿದ್ದ ಯಡಿಯೂರಪ್ಪ ಅವರು ಈಗ ಮತ್ತೂಮ್ಮೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕಗೊಳ್ಳುವುದರೊಂದಿಗೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಮತ್ತೆ ಮುಖ್ಯಮಂತ್ರಿಯಾಗುವ ವಿಶ್ವಾಸದಲ್ಲಿದ್ದಾರೆ.

Write A Comment