ಕರ್ನಾಟಕ

ಸಿಇಟಿಗೂ ಮೊದಲೇ ಪಿಯು ಫಲಿತಾಂಶ

Pinterest LinkedIn Tumblr

pucಬೆಂಗಳೂರು, ಏ. ೨೭- ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯ ಬಿರುಸಿನಿಂದ ನಡೆದಿದ್ದು, ಸಿಇಟಿ ಫಲಿತಾಂಶಕ್ಕೆ ಮುನ್ನವೇ ಪಿಯು ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಇಂದಿಲ್ಲಿ ತಿಳಿಸಿದರು.
ಕಳೆದ ವರ್ಷ ಮೇ 18ಕ್ಕೆ ದ್ವಿತೀಯ ಪಿಯು ಫಲಿತಾಂಶವನ್ನು ಪ್ರಕಟಿಸಲಾಗಿತ್ತು. ಈ ವರ್ಷವೂ ಆ ದಿನಾಂಕದ ಆಜುಬಾಜಿನಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರಿಗೆ ತಿಳಿಸಿದರು.
ಮೌಲ್ಯಮಾಪನ ಕಾರ್ಯ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಎಲ್ಲವನ್ನು ಸುಸೂತ್ರವಾಗಿ ಪೂರ್ಣಗೊಳಿಸಿ ಸಿಇಟಿ ಫಲಿತಾಂಶಕ್ಕೆ ಮೊದಲೇ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಅವರು ಹೇಳಿದರು.

Write A Comment