ಕರ್ನಾಟಕ

ಪ್ರೀತಿಸಿ ಮದುವೆಯಾಗಲು ನಿರಾಕರಿಸಿದ ಪ್ರಿಯಕರಿನಿಗೆ ಸಾರ್ವಜನಿಕವಾಗಿಯೇ ಚಾಕುವಿನಿಂದ ಇರಿದ ಪ್ರೇಯಸಿ

Pinterest LinkedIn Tumblr

sumanth

ಶಿವಮೊಗ್ಗ: ತನ್ನನ್ನು ಪ್ರೀತಿಸಿ ಮದುವೆಯಾಗಲು ನಿರಾಕರಿಸಿದ ಪ್ರಿಯಕರಿನಿಗೆ ಸಾರ್ವಜನಿಕವಾಗಿಯೇ ಪ್ರೇಯಸಿ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ ಘಟನೆ ತೀರ್ಥಹಳ್ಳಿಯ ಖಾಸಗಿ ಬಸ್ ನಿಲ್ದಾಣದಲ್ಲಿ ಗುರುವಾರ ನಡೆದಿದೆ.

ಕಳೆದ 2 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಮೇಘಾಶೆಟ್ಟಿ ಹಾಗೂ ಸುಮಂತ್ (22) ನಡುವೆ ಇಂದು ತೀರ್ಥಹಳ್ಳಿ ಬಸ್ ನಿಲ್ದಾಣದಲ್ಲಿ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ನಡುವೆ ಮಾತಿನ ಚಕಮಕಿ ನಡೆದಿತ್ತು. ನಂತರ ಯುವಕ ಮದುವೆಗೆ ನಿರಾಕರಿಸಿದ್ದಕ್ಕೆ ಆಕ್ರೋಶಗೊಂಡ ಪ್ರೇಯಸಿ ಚೂರಿಯಿಂದ ಇರಿದು ಸ್ಥಳದಿಂದ ಪರಾರಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಅಂತಿಮ ವರ್ಷದ ಬಿಬಿಎಂ ವಿದ್ಯಾರ್ಥಿನಿಯಾಗಿರುವ ಮೇಘಾ ಶೆಟ್ಟಿ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸುತ್ತಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಗಾಯಗೊಂಡ ಪ್ರಿಯಕರನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Write A Comment