ಕರ್ನಾಟಕ

ಬೆಂಗಳೂರಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

Pinterest LinkedIn Tumblr

murder

ಬೆಂಗಳೂರು: ರೌಡಿಶೀಟರ್ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

ಮಾಗಡಿ ರಸ್ತೆ ಪೊಲೀಸ್ ಠಾಣೆಯ ಹಳೇ ರೌಡಿಶೀಟರ್ ಹರ್ಷ ಕೊಲೆಯಾಗಿದ್ದಾನೆ. ನಿನ್ನೆ ರಾತ್ರಿ ವಿಜಯನಗರದ ಪೈಪ್‍ಲೈನ್ ರಸ್ತೆಯಲ್ಲಿ ಬಳಿ ಹರ್ಷ ತೆರಳುತ್ತಿದ್ದಾಗ ನಾಲ್ವರು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಲಾಂಗು ಮಚ್ಚುಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ರೌಡಿಶೀಟರ್ ಹರ್ಷ ಸ್ಥಳದಲ್ಲೇ ಸಾವನಪ್ಪಿದ್ದಾನೆ.

ಹಳೇ ವೈಷ್ಯಮ್ಯವೇ ಕೊಲೆಗೆ ಕಾರಣ ಎನ್ನಲಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ದೌಡಾಯಿಸಿದ ವಿಜಯನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸದ್ಯ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ.

Write A Comment