ಕರ್ನಾಟಕ

ನೀರು ಪೂರೈಕೆಗೆ ಸೂಸೂತ್ರ ಕರೆಂಟ್ : ಡಿಕೆಶಿ ಫರ್ಮಾನು

Pinterest LinkedIn Tumblr

dk-shivakumar2ಬೆಂಗಳೂರು, ಏ. ೨೮- ಕುಡಿಯುವ ನೀರು ಪೂರೈಕೆ ಯೋಜನೆಗಳಿಗೆ ವಿದ್ಯುತ್ ಸಮಸ್ಯೆ ಎದುರಾದ 24 ಗಂಟೆಯಲ್ಲಿ ಅದನ್ನು ಬಗೆಹರಿಸಬೇಕು ಎಂದು ಎಲ್ಲಾ ಎಸ್ಕಾಂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಇಂದಿಲ್ಲಿ ತಿಳಿಸಿದರು.
ಕುಡಿಯುವ ನೀರು ಪೂರೈಕೆ ಯೋಜನೆಗಳಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ವತಿಯಿಂದ ಹಣ ಪಾವತಿ ಮಾಡಬೇಕು ಎಂದು ನಿರೀಕ್ಷಿಸದೆ ಇಂಥ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ವಿದ್ಯುತ್ ಸಮಸ್ಯೆ ಕುರಿತು ಶಾಸಕ ವೈ.ಎಸ್.ವಿ. ದತ್ತ ಅವರೊಂದಿಗೆ ಚರ್ಚೆ ನಡೆಸಿದ ನಂತರ ಸುದ್ದಿಗಾರರಿಗೆ ಅವರು ಈ ವಿಷಯ ತಿಳಿಸಿದರು.
ರಾಜ್ಯದಲ್ಲಿ ಬೇಡಿಕೆ ಇರುವಷ್ಟು ವಿದ್ಯುತ್‌ನ್ನು ಪೂರೈಸಲಾಗುತ್ತಿದೆ. ಎಲ್ಲೂ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
ನಿನ್ನೆ ವಿದ್ಯುತ್ ಬೇಡಿಕೆ 9300 ಮೆಗಾವ್ಯಾಟ್‌ಗೆ ತಲುಪಿತ್ತು. ಗ್ರಾಮೀಣ ಭಾಗದಲ್ಲಿ 6 ಗಂಟೆಕಾಲ ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡಲಾಗತ್ತಿದೆ ಎಂದು ಸಚಿವ ಶಿವಕುಮಾರ್ ತಿಳಿಸಿದರು.
ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಎದುರಾದಲ್ಲಿ ಖಾಸಗಿಯವರಿಂದ ನೀರನ್ನು ಖರೀದಿಸಿ ಟ್ಯಾಂಕರ್ ಮೂಲಕ ಸರಬರಾಜು ಮಾಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಕಡೂರು ಕ್ಷೇತ್ರದಲ್ಲಿನ ವಿದ್ಯುತ್ ಸಮಸ್ಯೆ ಬಗೆಹರಿಸಲು 150 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ತೀರ್ಮಾನಿಸಲಾಗಿದೆ. 110/11 ಕೆ.ವಿ. ಸಾಮರ್ಥ್ಯದ 3 ಸಬ್‌ಸ್ಟೇಷನ್ ನಿರ್ಮಾಣ ಸೇರಿದಂತೆ ವಿವಿಧ ಯೋಜನೆಗಳನ್ನು ಶೀಘ್ರಗತಿಯಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಅವರು ಹೇಳಿದರು.

Write A Comment