ಕರ್ನಾಟಕ

ಸಾರಥ್ಯ ನನ್ನದು – ಬುರುಡೆ ವೈರಿಗಳದು

Pinterest LinkedIn Tumblr

Sidduಮೈಸೂರು,ಏ,28-ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನು ನನ್ನ ರಾಜಕೀಯ ವೈರಿಗಳು ಪ್ರಚಾರ ಮಾಡುತ್ತಿದ್ದಾರೆ. ಇಂತಹ ಅಪಪ್ರಚಾರಕ್ಕೆ ಹೆಚ್ಚು ಮಹತ್ವ ನೀಡುವ ಅಗತ್ಯವಿಲ್ಲ. ಮುಂದಿನ 2 ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.
ಈ ವರ್ಷ ರಾಜ್ಯದೆಲ್ಲೆಡೆ ಉಷ್ಣಾಂಶ ಹೆಚ್ಚಾಗಿದೆ. ಜೂನ್ ೧೫ರವರೆಗೆ ಮಳೆ ಬರದೆ ಇದ್ದರೆ ಬರ ಎದುರಿಸಲು ನಾವು ಸಿದ್ಧರಿದ್ದೇವೆ. ಜನತೆಯ ಕಷ್ಟಕ್ಕೆ ಸ್ಪಂದಿಸುವುದೇ ನನ್ನ ಆದ್ಯ ಕರ್ತವ್ಯ. ನನ್ನ ಏಳಿಗೆಯನ್ನು ಸಹಿಸದವರು ಬಿಟ್ಟಿ ಪ್ರಚಾರಕ್ಕಾಗಿ ಹಾತೊರೆಯುತ್ತಿದ್ದಾರೆ. ಇದಕ್ಕೆ ಸೊಪ್ಪು ಹಾಕುವುದಿಲ್ಲ. ಇಲ್ಲಸಲ್ಲದ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲಾರೆ ಎಂದು ತಿರುಗೇಟು ನೀಡಿದರು.
ಇಂದು ಬೆಳಿಗ್ಗೆ ಮೈಸೂರು ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜೂನ್‌ನಲ್ಲಿ ಮಳೆ ಬರುವ ನಿರೀಕ್ಷೆ ಇದೆ. ಆಯಾ ಜಿಲ್ಲೆಗಳಿಗೆ ಜನ ಜಾನುವಾರುಗಳಿಗೆ ಕುಡಿಯುವ ನೀರಿಗೆ ಹಣ ಬಿಡುಗಡೆ ಮಾಡಲಾಗಿದೆ. ಹಾವೇರಿ ಜಿಲ್ಲೆಯಲ್ಲಿ ಬರ ಸಮೀಕ್ಷೆಯನ್ನು ಅಧಿಕಾರಿಗಳು ಜಂಟಿಯಾಗಿ ಮಾಡಬೇಕಾಗಿತ್ತು. ಇದರಿಂದ ರೈತರಿಗೆ ಅನ್ಯಾಯವಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೇವೆ. ಎಷ್ಟೇ ಕಷ್ಟವಾದರೂ ಕುಡಿಯುವ ನೀರಿಗೆ ತೊಂದರೆ ಬಾರದಂತೆ ನೋಡಿಕೊಳ್ಳುತ್ತೇವೆ. ಅಧಿಕಾರಿಗಳು ಪ್ರತಿ ಹಳ್ಳಿಗಳಿಗೆ ತೆರಳಿ ಪರಿಸ್ಥಿತಿ ಅವಲೋಕಿಸುವಂತೆ ಸೂಚನೆ ನೀಡಿದ್ದೇನೆ. ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮಹದಾಯಿ ಯೋಜನೆ ವಿಚಾರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಇರುವುದರಿಂದ ನಾನು ನಾರಿಮನ್ ಜೊತೆ ಚರ್ಚೆ ಮಾಡುತ್ತೇನೆ. ಅವರು ರಾಷ್ಟ್ರೀಯ ಮಟ್ಟದ ಮುತ್ಸದ್ಧಿ ವಕೀಲರು ಹಾಗೂ ನೀರಾವರಿ ತಜ್ಞರು ಸಹ ಆಗಿರುವುದರಿಂದ ಅವರ ಸಲಹೆ ಅಗತ್ಯವಾಗಿದೆ ಎಂದರು.
ಜೆಡಿಎಸ್ ನಾಯಕರು ರಾಜ್ಯಕ್ಕೆ ಯಾವಾಗಲೂ ಉತ್ತಮ ಸಲಹೆ ನೀಡಿಲ್ಲ. ನಾನು ರೈತರಿಗೆ ಏನೂ ಮಾಡಬೇಕೊ ಅದು ಮಾಡಿದ್ದೇನೆ. ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು. ಆತ್ಮಹತ್ಯೆ ಸಮಸ್ಯೆಗೆ ಪರಿಹಾರವಲ್ಲ. ಏನೇ ಕಷ್ಟ ಬಂದರೂ ಧೈರ್ಯದಿಂದ ಎದುರಿಸಬೇಕು. ಸರ್ಕಾರ ರೈತರ ಹಿತ ಕಾಯಲು ಬದ್ಧವಾಗಿದೆ ಎಂದು ಹೇಳಿದರು.

Write A Comment