ಕರ್ನಾಟಕ

ಆಸ್ತಿ ತೆರಿಗೆ ಕಡಿತಕ್ಕೆ ಮನವಿ

Pinterest LinkedIn Tumblr

gerಬೆಂಗಳೂರು, ಏ. ೨೯ – ಬಿಬಿಎಂಪಿಯ ಈ ಸಾಲಿನ ಮುಂಗಡ ಪತ್ರದಲ್ಲಿ ನಗರದ ಸ್ಥಿರಾಸ್ತಿಗಳ ಮೇಲಿನ ತೆರಿಗೆ ನಿಗದಿ ಮತ್ತು ವಲಯ ವರ್ಗೀಕರಣದಲ್ಲಿ ಸಾಕಷ್ಟು ಲೋಪದೋಷಗಳಿದ್ದು, ಇದರಿಂದ ಸಾರ್ವಜನಿಕ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದ್ದು, ಆದ್ದರಿಂದ ಮತ್ತೊಮ್ಮೆ ಪರಿಷ್ಕರಣೆ ಮಾಡುವಂತೆ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಬೆಂಗಳೂರು ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ. ಶೇಖರ್ ಮನವಿ ಮಾಡಿದ್ದಾರೆ.
ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಪಕ್ಷದ ದೃಷ್ಟಿಯಿಂದಲೂ ಈಗ ನಿಗದಿಪಡಿಸಿರುವ ಆಸ್ತಿ ತೆರಿಗೆ ಮತ್ತು ವಲಯಗಳ ವರ್ಗೀಕರಣ ಪರಿಷ್ಕರಿಸಬೇಕೆಂದು ಒತ್ತಾಯಿಸಿರುವ ಅವರು, ಈ ಹಿಂದೆ ಇದ್ದ ರೀತಿಯಲ್ಲಿಯೇ ವಲಯಗಳನ್ನು ಮುಂದುವರಿಸಬೇಕು, ಗೃಹೋಪಯೋಗಿ ಕಟ್ಟಡಗಳಿಗೆ ಶೇ. 20ರಷ್ಟು ಮತ್ತು ವಾಣಿಜ್ಯ ಕಟ್ಟಡಗಳಿಗೆ ಶೇ. 25ರಷ್ಟು ಆಸ್ತಿ ತೆರಿಗೆಯನ್ನು ಹೆಚ್ಚುವರಿಯಾಗಿ ನಿಗದಿಪಡಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

Write A Comment