ಮೈಸೂರು,ಏ.29-ಮಾಜಿ ಸಚಿವ ರಾಮದಾಸ್ ಅವರು ನನಗೆ ಕಿರುಕುಳ ನೀಡುತ್ತಿದ್ದು, ಇದನ್ನು ತಪ್ಪಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಪ್ರೇಮಾಕುಮಾರಿ ಮನವಿ ಸಲ್ಲಿಸಿದ್ದಾರೆ.
ಪ್ರತಿದಿನ ಠಾಣೆ ಮತ್ತು ನ್ಯಾಯಾಲಯಕ್ಕೆ ಅಲೆದಾಡುವುದೇ ಆಗಿದೆ ಎಂದು ಪ್ರೇಮಾಕುಮಾರಿ ಅಳಲು ತೋಡಿಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರೇಮಕುಮಾರಿ ಅವರಿಂದ ಮನವಿ ಸ್ವೀಕರಿಸಿ ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.