ಕರ್ನಾಟಕ

ರಾಜ್ಯದಲ್ಲಿ 3 ನೂತನ ಮೆಡಿಕಲ್ ಕಾಲೇಜುಗಳ ಸ್ಥಾಪನೆ

Pinterest LinkedIn Tumblr

stateಕಲಬುರಗಿ, ಏ.29-ರಾಜ್ಯದಲ್ಲಿ ಮೂರು ನೂತನ ಮೆಡಿಕಲ್ ಕಾಲೇಜು ಸ್ಥಾಪಿಸಲು ಸರ್ಕಾರ ಮುಂದಾಗಿದ್ದು, ಈ ಕಾಲೇಜು ಸ್ಥಾಪನೆಯಿಂದ 450 ಹೆಚ್ಚುವರಿ ಸೀಟ್‌ಗಳು ಲಭ್ಯವಾಗಲಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಚಾಮರಾಜನಗರ, ಕಾರವಾರ ಮತ್ತು ಕೊಡಗು ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ ಅನುಮತಿ ನೀಡಿದೆ ಎಂದರು.

ರಾಜ್ಯದಲ್ಲಿ ಮೂರು ಹೊಸ ಮೆಡಿಕಲ್ ಕಾಲೇಜು ಸ್ಥಾಪನೆಯ ನಿರ್ಧಾರ ಕೈಗೊಂಡಿರುವುದು ನಮ್ಮ ಸರ್ಕಾರದ ಅಲ್ಪಾವಧಿಯಲ್ಲೇ ಅತಿ ದೊಡ್ಡ ಸಾಧನೆಯಾಗಿದೆ ಎಂದರು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸರ್ಕಾರದ ಕೊಡುಗೆಯಾಗಿ ಎಲ್ಲ ಸೀಟುಗಳು ಸರ್ಕಾರದ ಕೋಟಾ ವ್ಯಾಪ್ತಿಗೊಳಪಡುತ್ತವೆ. ಬೆಂಗಳೂರು ಮೆಡಿಕಲ್ ಕಾಲೇಜಿಗೆ ಖಾಯಂ ಮಾನ್ಯತೆ ದೊರೆತಿದೆ. ಮೈಸೂರು, ಹುಬ್ಬಳ್ಳಿ ಮತ್ತು ಬಳ್ಳಾರಿ ಮೆಡಿಕಲ್ ಕಾಲೇಜುಗಳಿಗೂ ಖಾಯಂ ಮಾನ್ಯತೆ ದೊರೆಯುವ ವಿಶ್ವಾಸವಿದೆ ಎಂದು ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.

Write A Comment