ಕರ್ನಾಟಕ

ಬಿಬಿಎಂಪಿ ಮುತ್ತಿಗೆ ಯತ್ನ: ಬಿಎಸ್ ವೈ ಸೇರಿ ಹಲವು ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

Pinterest LinkedIn Tumblr

Bsy-20

ಬೆಂಗಳೂರು: ಆಸ್ತಿ ತೆರಿಗೆ ಏರಿಕೆಯನ್ನು ವಿರೋಧಿಸಿ ಬೆಂಗಳೂರು ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದರು.

BBMP-BJP-yaddi

ಮಂಗಳವಾರ ಬೆಳಗ್ಗೆ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ನಾಯಕರಾದ ಆರ್.ಅಶೋಕ್, ಕಟ್ಟಾಸುಬ್ರಮಣ್ಯ ನಾಯ್ಡು, ವಿ. ಸೋಮಣ್ಣ, ವಿಜಯ್ ಕುಮಾರ್, ಮುನಿರಾಜು ಹಾಗೂ ಬಿಬಿಎಂಪಿಯ ಬಿಜೆಪಿ ಸದಸ್ಯರು ಮುತ್ತಿಗೆ ಹಾಕಲು ಯತ್ನಿಸಿದರು. ಮುತ್ತಿಗೆ ಹಾಕಲು ಯತ್ನಿಸಿದವರನ್ನು ತಡೆದ ಪೊಲೀಸರು ಅವರನ್ನು ಬಂಧಿಸಿದರು.

ಸಿದ್ದರಾಮಯ್ಯ ಸರ್ಕಾರದ ತುಘಲಕ್ ದರ್ಬಾರ್​ನ್ನು ಕೊನೆಗೊಳಿಸಬೇಕಿದೆ. ಆಸ್ತಿ ತೆರಿಗೆಯನ್ನು ಹೆಚ್ಚಿಸುವ ಮೂಲಕ ಜನರಿಗೆ ಅನವಶ್ಯಕವಾಗಿ ತೊಂದರೆ ಕೊಡುತ್ತಿದ್ದೀರಿ. ಜನರು ಉಸಿರಾಡೋದು, ಬದುಕೋದು ಬೇಡವೇ. ಆಸ್ತಿ ತೆರಿಗೆ ಹೆಚ್ಚಳವನ್ನು ವಿರೋಧಿಸಿದ ಬಿಜೆಪಿ ಕಾರ್ಪೆರೇಟರ್​ಗಳು ಬಿಬಿಎಂಪಿಯಲ್ಲಿ 24 ಗಂಟೆ ಪ್ರತಿಭಟನೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ 100 ಜನ ಕಾರ್ಪೆರೇಟರ್​ಗಳನ್ನು ಉಚ್ಛಾಟನೆ ಮಾಡಲಿ. ಕಾರ್ಪೆರೇಟರ್​ಗಳನ್ನು ಉಚ್ಛಾಟನೆ ಮಾಡುವುದರಿಂದ ಹೋರಾಟ ನಿಲ್ಲಿಸಲು ಸಾಧ್ಯವಿಲ್ಲ ಎಂದು ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು.

ಕಂಠೀರವ ಕ್ರೀಡಾಂಗಣದಿಂದ ಬಿಜೆಪಿಯ ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಆಗಮಿಸಿ ಬಿಬಿಎಂಪಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

Write A Comment