ಕರ್ನಾಟಕ

ಆಸಿಡ್ ದಾಳಿಗೆ ಒಳಗಾದ ಮಹಿಳೆಯರಿಗೆ ಪರಿಹಾರ ಧನ ಬಿಡುಗಡೆ

Pinterest LinkedIn Tumblr

acidಬೆಂಗಳೂರು, ಮೇ 3- ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಪರಿಹಾರ ಧನ ಹಾಗೂ ಪುನರ್ವಸತಿ ಕಲ್ಪಿಸಲು ಸುರಕ್ಷಾ ಯೋಜನೆಯಡಿ 12.50 ಲಕ್ಷ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರಾಜ್ಯ ಮಹಿಳಾ ಆಯೋಗಕ್ಕೆ 50 ಲಕ್ಷ ರೂ. ಅನುದಾನ ಒದಗಿಸಿದ್ದು, ಈ ಪೈಕಿ ಮೊದಲ ತ್ರೈ ಮಾಸಿಕ ಕಂತಿನ ಅನುದಾನವಾಗಿ 12.50 ಲಕ್ಷ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿರುವ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ರಾಜ್ಯ ಮಹಿಳಾ ಆಯೋಗ ಕಳೆದ ಸಾಲಿನಲ್ಲಿ ಅನುಷ್ಠಾನಗೊಳಿಸಿದ್ದ ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲೂ ಕೂಡ ಮುಂದುವರೆಸಲಾಗಿದೆ.

ಮಹಿಳಾ ಆಯೋಗಕ್ಕೆ ಬಿಡುಡೆ ಮಾಡಿರುವ ಅನುದಾನವನ್ನು ನಿಗದಿತ ಅವಧಿಯೊಳಗೆ ವೆಚ್ಚ ಮಾಡಿ ಉಪಯೋಗಿತ ಪ್ರಮಾಣ ಪತ್ರವನ್ನು ಸಲ್ಲಿಸಲು ಆದೇಶದಲ್ಲಿ ಸೂಚಿಸಲಾಗಿದೆ.

Write A Comment