ಕರ್ನಾಟಕ

ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರ ಸ್ಥಾನ ಸಿಎಂ ಆಪ್ತನಿಗೆ; ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರು

Pinterest LinkedIn Tumblr

siddu

ಬೆಂಗಳೂರು: ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸರಿಯಾಗಿಲ್ಲ. ಸಿಎಂ ಆಪ್ತ ಎನ್ನುವ ಕಾರಣಕ್ಕೆ ಲಕ್ಷ್ಣಣ್ ಗೆ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಆರೋಪಿಸಿ ಲೋಕಾಯುಕ್ತದಲ್ಲಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ.

ಆರ್‍ಟಿಐ ಕಾರ್ಯಕರ್ತ ನರಸಿಂಹ ಮೂರ್ತಿಯವರು ದೂರು ನೀಡಿದ್ದು, ಕಾಯ್ದೆಯ ಪ್ರಕಾರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗುವವರು ಪರಿಸರ ವಿಜ್ಞಾನ ವಿಭಾಗದಲ್ಲಿ ಪದವಿ ಪಡೆದಿರಬೇಕು. ಆದರೆ ಲಕ್ಷ್ಮಣ್ ಬಿಇ ಸಿವಿಲ್ ಎಂಜಿನಿಯರಿಂಗ್‍ನಲ್ಲಿ ಪದವಿ ಪಡೆದಿದ್ದಾರೆ. ಅಲ್ಲದೇ ಅಲ್ಲದೇ ಅವರ ಆಯ್ಕೆ ಪ್ರಕ್ರಿಯೆಯನ್ನು ಕಾನೂನಾತ್ಮಕವಾಗಿ ಮಾಡಿಲ್ಲ. ತರಾತುರಿಯಲ್ಲಿ ಆಯ್ಕೆ ಪ್ರಕ್ರಿಯೆ ಮಾಡಲಾಗಿದ್ದು ಈ ಬಗ್ಗೆ ಈ ಬಗ್ಗೆ ತನಿಖೆ ನಡೆಸುವಂತೆ ಆವರು ಮನವಿ ಮಾಡಿದ್ದಾರೆ.

ಕಾನೂನು ಉಲ್ಲಂಘನೆ ಯಾಗಿದ್ದು ಹೇಗೆ?
ಸುಪ್ರೀಂ ಕೋರ್ಟ್ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಸೂಚಿಸಿರುವ ವಿದ್ಯಾರ್ಹತೆ ಲಕ್ಷ್ಮಣ್‍ಗೆ ಇಲ್ಲ. ಸರ್ಕಾರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ಸ್ಥಾನಕ್ಕೆ ಐದು ಜನವಿರುವ ಸಮಿತಿ ರಚನೆ ಮಾಡಿತ್ತು. ಈ ಸಮಿತಿ ಲಕ್ಷ್ಮಣ್ ಅವರ ಹೆಸರನ್ನು ಸೂಚಿಸಿರಲಿಲ್ಲ. ಆದರೆ ಸಿಎಂ ಸಿದ್ದರಾಮಯ್ಯನವರಿಗೆ ಅಂತಿಮ ಕಡತ ಹೋಗುವಾಗ ಲಕ್ಷ್ಮಣ್ ಹೆಸರನ್ನು ಪೆನ್ನಿನಲ್ಲಿ ಅಂದಿನ ಪ್ರಧಾನ ಕಾರ್ಯದರ್ಶಿ ಮದನ್ ಗೋಪಾಲ್ ಬರೆದಿದ್ದು, ಈ ಕಡತಕ್ಕೆ ಸಿಎಂ ಸಹಿ ಹಾಕಿದ್ದಾರೆ. ಅಷ್ಟೇ ಅಲ್ಲದೇ ಅಧ್ಯಕ್ಷರ ಆಯ್ಕೆಗೂ 15 ದಿನದ ಹಿಂದೆ ಮುಂಚಿತವಾಗಿ ಜಾಹೀರಾತು ನೀಡಬೇಕು. ಆದರೆ ಜಾಹೀರಾತು ನೀಡದೇ ಆಯ್ಕೆ ಮಾಡಿದ್ದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ನರಸಿಂಹ ಮೂರ್ತಿ ಹೇಳಿದ್ದಾರೆ.

Write A Comment