
ಬೆಂಗಳೂರು: ಬಿಸಿಲ ಬೇಗೆಯಿಂದ ಬಳಲಿದ್ದ ಸಿಲಿಕಾನ್ ಸಿಟಿ ಜನತೆಗೆ ಮಳೆರಾಯ ಶುಕ್ರವಾರ ತಂಪೆರೆದಿದ್ದು, ಬೆಂಗಳೂರಿನಲ್ಲಿ ಆಲಿಕಲ್ಲು ಸಮೇತ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆಯಿಂದಾಗ ಮೆಜೆಸ್ಟಿಕ್ ಸೇರಿದಂತೆ ಹಲವು ಕಡೆ ವಾಹನ ಸಂಚಾರ ತೀವ್ರ ಅಸ್ತವ್ಯಸ್ತವಾಗಿದೆ.
ಶಿವಾಜಿನಗರ, ಮೆಜೆಸ್ಟಿಕ್, ಗಾಂಧಿನಗರ ಸೇರಿದಂತೆ ಬೆಂಗಳೂರಿನ ಹಲವು ಭಾಗಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಸಂಚಾರ ದಟ್ಟಣೆ ಉಂಟಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ವಾಹನ ಸವಾರರು ಮನೆ ತಲುಪಲು ಪರದಾಡುತ್ತಿದ್ದಾರೆ.
ಶಾಂತಿನಗರ, ಶೇಷಾದ್ರಿಪುರಂ, ಬಾಪೂಜಿನಗರ, ಈಜಿಪುರ, ಮಾಗಡಿರಸ್ತೆ, ಇಂದಿರಾನಗರ, ಚಾಮರಾಜಪೇಟೆ, ರಾಜಾಜಿನಗರ, ಕೆ.ಆರ್,ವೃತ್ತ, ಬಸವೇಶ್ವರ ನಗರ, ಸೇರಿದಂತೆ ನಗರದ ಬಹುತೇಕ ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ.