
ಬೆಂಗಳೂರು: ನಾಲ್ಕು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನೃತ್ಯ ಶಿಕ್ಷಕನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಪೀಟರ್(22) ಬಂಧಿತ ಆರೋಪಿ. ಖಾಸಗಿ ಶಾಲೆ ಆಯೋಜಿಸಿದ್ದ ಬೇಸಿಗೆ ಶಿಬಿರದಲ್ಲಿ ನೃತ್ಯ ಶಿಕ್ಷಕನಾಗಿದ್ದ ಈತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಹೊಟ್ಟೆನೋವು ಎಂದು ಬಾಲಕಿ ಅಳತೊಡಗಿದಾಗ ಪೋಷಕರು ಮಗುವನ್ನು ವೈದ್ಯರ ಬಳಿ ಕರೆದುಕೊಂಡು ಹೋಗಿದ್ದಾರೆ. ಮಗುವನ್ನು ಪರೀಕ್ಷಿಸಿದ ವೈದ್ಯರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ತಿಳಿಸಿದ್ದಾರೆ. ಈ ಸಂಬಂಧ ಪೋಷಕರು ಪೊಲೀಸ್ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.