ಕರ್ನಾಟಕ

ತನ್ನ ಪುಟ್ಟ ಮಗನನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾದ ತಾಯಿ

Pinterest LinkedIn Tumblr

Belgavi

ಬೆಳಗಾವಿ: ಅಮ್ಮಂದಿರ ದಿನವಾದ ಇಂದು ಮಹಿಳೆಯೊಬ್ಬರು ತನ್ನ ಪುಟ್ಟ ಮಗನನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 8 ವರ್ಷದ ಸುಪ್ರೀತ ನೇಮಗೌಡರ್ ಕೊಲೆಯಾದ ಕಂದಮ್ಮ. ಈತನ ತಾಯಿ ತ್ರಿಶೀಲಾ ನೆಮಗೌಡರ್ (34) ಮಗುವನ್ನು ಕೊಲೆಗೈದು ನಂತರ ಆಕೆಯೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇವರ ಸಾವಿಗೆ ಕಾರಣವೇನೆಂದು ಸದ್ಯಕ್ಕೆ ಸ್ಪಷ್ಟವಾಗಿ ತಿಳಿದುಬಂದಿಲ್ಲ.

ಈ ಬಗ್ಗೆ ವಿಷಯ ತಿಳಿದ ಅಥಣಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Write A Comment