ಕರ್ನಾಟಕ

ಹೆಚ್ಚಿನ ಅನುದಾನ: ಸಿದ್ದು ನಿರೀಕ್ಷೆ

Pinterest LinkedIn Tumblr

sidduಬೆಂಗಳೂರು,ಮೇ.೮-ರಾಜ್ಯದಲ್ಲಿ ಕಾಣಿಸಿಕೊಂಡಿರುವ ಭೀಕರ ಬರಗಾಲದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪರಿಹಾರ ಕಾಮಗಾರಿ ಕೈಗೆತ್ತಿಕೊಳ್ಳಲು ಅನುವಾಗುವಂತೆ ೧೨,೨೭೨ ಕೋಟಿ ರೂಪಾಯಿ ವಿಶೇಷ ಅನುದಾನ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದು ಹೆಚ್ಚಿನ ಪರಿಹಾರ ಸಿಗುವ ನಿರೀಕ್ಷೆಯಲ್ಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದ್ದಾರೆ.
ರಾಜ್ಯದಲ್ಲಿ ತಲೆದೋರಿರುವ ಸಮಸ್ಯೆಯನ್ನು ಸಂಪೂರ್ಣವಾಗಿ ಪ್ರಧಾನಿ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ.ಅವರೂ ಕೂಡ ಸಾಧ್ಯವಾದಷ್ಟು ಪರಿಹಾರ ನೀಡುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ನಗರದ ನಗರ್ತ ಪೇಟೆಯಲ್ಲಿನ ಕಾಳಿಕಾಂಬ ಕಮಟೇಶ್ವರ ಸ್ವಾಮಿ ದೇವಾಲಯದ ಕುಂಬಾಭಿಷೇಕ ಮತ್ತು ಕಳಸ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದ ಬರ ಪರಿಸ್ಥಿಯನ್ನು ಸರ್ಕಾರ ಸಮರ್ಥವಾಗಿ ನಿರ್ವಹಿಸುತ್ತಿದೆ ಮತ್ತಷ್ಟು ಕಾಮಗಾರಿ ಕೈಗೊಳ್ಳಲು ಹೆಚ್ಚಿನ ನೆರವಿಗೆ ಮನವಿ ಮಾಡಲಾಗಿದೆ ಎಂದರು.
ಕುಡಿಯುವ ನೀರಿನ ಘಟಕ;ತನಿಖೆ
ರಾಜ್ಯದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡುವ ವಿಚಾರದಲ್ಲಿ ನಿಯಮ ಮೀರಿ ಟೆಂಡರ್ ನೀಡಿದ್ದರೆ ಇಲ್ಲವೆ ಏನಾದರೂ ಅವ್ಯವಹಾರ ನಡೆದಿದ್ದರೆ ಆ ಬಗ್ಗೆ ಸಿಓಡಿ ತನಿಖೆ ನಡೆಸುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ. ಸಿಓಡಿ ತನಿಖೆ ನಡೆಸಲಾಗುವುದು ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕುಡಿಯುವ ನೀರಿನ ಘಟಕ ತೆರೆಯುವುದರಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ.ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಸುಖಾ ಸುಮ್ಮನೆ ಆರೋಪ ಮಾಡಿದ್ದಾರೆ.ಹೀಗಾಗಿ ತನಿಖೆಗೆ ಆದೇಶಿಸಲಾಗಿದೆ ವರದಿ ಬರಲಿ ಎಂದು ಹೇಳಿದರು.
ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಕುಡಿಯುವ ನೀರಿಗೆ ಬಳಸುವ ಹಣವನ್ನು ಅಧಿಕಾರಿಗಳು ಬೇರೊಂದು ಖಾತೆಯಲ್ಲಿ ಬಚ್ಚಿಟ್ಟಿರುವ ಕುರಿತಂತೆ ಕೇಳಲಾದ ಪ್ರಶ್ನೆಗೆ ಉತ್ತರಿಸಲು ಅವರು ನಿರಾಕರಿಸಿದರು.
ಈ ಸಂದರ್ಭದದಲ್ಲಿ ಮಾಜಿ ಸಚಿವ ಹೆಚ್.ಎಂ ರೇವಣ್ಣ, ರಾಜ್ಯ ಚುನಾವಣಾ ಆಯುಕ್ತ ಶ್ರೀನಿವಾಸಾಚಾರಿ, ಜಿಲ್ಲಾಧಿಕಾರಿ ವಿ.ಶಂಕರ್ ಸೇರಿದಂತೆ ದೇವಸ್ತಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಂಪುಟ ಪುನರ್ರಚನೆ

ರಾಜ್ಯದಲ್ಲಿ ಬರ ಪರಿಹಾರ ವೀಕ್ಷಣೆಯ ಬಳಿಕ ಸಚಿವ ಸಂಪುಟ ಪುನರ್ರಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.
ಹೀಗಾಗಿ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ಉತ್ಸಾಹದಲ್ಲಿರುವ ಶಾಸಕರು ಮತ್ತು ಆಕಾಂಕ್ಷಿಗಳಲ್ಲಿ ಉತ್ಸಾಹ ಮತ್ತಷ್ಟು ಗರಿಗೆದರುವಂತೆ ಮಾಡಿದೆ
ಆದಷ್ಟು ಬೇಗ ಸಚಿವ ಸಂಪುಟವನ್ನು ವಿಸ್ತರಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

Write A Comment