ಕರ್ನಾಟಕ

ಐಐಎಸ್ಸಿ ದಾಳಿ; ಐವರಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಹೈಕೋರ್ಟ್

Pinterest LinkedIn Tumblr

High-courtಬೆಂಗಳೂರು: ಐಐಎಸ್ ಸಿ ಮೇಲೆ ಉಗ್ರರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷೆನ್ಸ್ ಕೋರ್ಟ್ ನೀಡಿರುವ ತೀರ್ಪನ್ನು ಹೈಕೋರ್ಟ್ ವಿಭಾಗೀಯ ಪೀಠ ಮಂಗಳವಾರ ಎತ್ತಿಹಿಡಿದಿದ್ದು, ಐವರು ಆರೋಪಿಗಳ ಶಿಕ್ಷೆಯನ್ನು ಖಾಯಂಗೊಳಿಸಿ ತೀರ್ಪು ನೀಡಿದೆ.

2005ರ ಡಿಸೆಂಬರ್ 28ರಂದು ಐಐಎಸ್ ಸಿ ಕ್ಯಾಂಪಸ್ ಗೆ ಉಗ್ರರು ನುಗ್ಗಿ ದಾಳಿ ನಡೆಸಿದ್ದರು. ಘಟನೆಯಲ್ಲಿ ಪ್ರೊ.ಜಗನ್ನಾಥ್ ಪುರಿ ಬಲಿಯಾಗಿದ್ದು, ನಾಲ್ವರು ಗಾಯಗೊಂಡಿದ್ದರು. ಪ್ರಕರಣದಲ್ಲಿ ಆರು ಆರೋಪಿಗಳಿಗೆ ಸೆಷೆನ್ಸ್ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಸೆಷೆನ್ಸ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಆರು ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಐವರು ಆರೋಪಿಗಳ ಜೀವಾವಧಿ ಶಿಕ್ಷೆ ಖಾಯಂಗೊಳಿಸಿ, ಒಬ್ಬ ಆರೋಪಿಯನ್ನು ಖುಲಾಸೆಗೊಳಿಸಿ ಆದೇಶ ನೀಡಿದೆ.
-ಉದಯವಾಣಿ

Write A Comment