ಕರ್ನಾಟಕ

ಮುಖ್ಯಮಂತ್ರಿಗಳು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ : ಖಮರುಲ್ಲ ಇಸ್ಲಾಂ

Pinterest LinkedIn Tumblr

kamaruಕಲಬುರಗಿ, ಮೇ 10- ನನ್ನ ಮೂರು ವರ್ಷಗಳ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಖಮರುಲ್ಲ ಇಸ್ಲಂ ತಿಳಿಸಿದ್ದಾರೆ. ಸಚಿವ ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಹೊಸಬರನ್ನು ತೆಗೆದುಕೊಳ್ಳುವುದು, ಹಳಬರನ್ನು ತೆಗೆಯಲು ಮುಖ್ಯಮಂತ್ರಿಗಳಿಗೆ ಪರಮಾಧಿಕಾರವಿದೆ. ಹಾಗಾಗಿ ಅವರ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಸ್ಪಷ್ಟಪಡಿಸಿದರು.

ನನ್ನ ಮೂರು ವರ್ಷದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನನ್ನ ಇಲಾಖೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ನನಗೆ ತೃಪ್ತಿಯಿದೆ. ಪುನಾರಚನೆ ಬಗ್ಗೆ ಮುಖ್ಯಮಂತ್ರಿ ಹೇಳಿದ್ದರು ಎಂದು ತಿಳಿಸಿದರು. ಕೃಷ್ಣಾ ನದಿಯಿಂದ ಯಾದಗಿರಿ ಜಿಲ್ಲೆಯ ನಾರಾಯಣಪುರ ಜಲಾಶಯಕ್ಕೆ ನೀರು ಬಿಡಲಾಗಿದೆ. ಕಲಬುರಗಿ ಜಿಲ್ಲೆಗೆ ಅಗತ್ಯ ನೀರು ಬಿಡುಗಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಸೂಚಿಸಿದ್ದಾರೆ ಎಂದರು. ಈ ಹಿನ್ನೆಲೆಯಲ್ಲಿ ನಾರಾಯಣಪುರದಿಂದ ಭೀಮಾ ನದಿಗೆ 1.5 ಟಿಎಂಸಿ ನೀರು ಬಿಡಲಾಗಿದೆ. ಅಲ್ಲದೆ, ಕಲಬುರಗಿ ನಗರದ ನೀರಿನ ಸಮಸ್ಯೆ ನಿವಾರಣೆಗೆ 1.61 ಕೋಟಿ ಯೋಜನೆ ರೂಪಿಸಲಾಗಿದೆ ಎಂದು ವಿವರಿಸಿದರು.

Write A Comment