ಬೆಂಗಳೂರು:ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಕೂಟಕ್ಕೆ ಜಯ ಲಭಿಸಿದ್ದು, ಸುಮಾರು 38 ವರ್ಷಗಳ ಬಳಿಕ ಬಿಜೆಪಿ ಅಧಿಕಾರದ ಗದ್ದುಗೆ ಏರಿದಂತಾಗಿದೆ. ಕಾಂಗ್ರೆಸ್ 38 ವರ್ಷಗಳ ನಂತರ ಅಧಿಕಾರ ಕಳೆದುಕೊಂಡಿದೆ.
ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯಲ್ಲಿ ಬಿಜೆಪಿ, ಜೆಡಿಎಸ್ ದೋಸ್ತಿಯಿಂದಾಗಿ ಕೈಗೆ ಅಧಿಕಾರ ತಪ್ಪಿದೆ. ಬಿಜೆಪಿಯ ಮುನಿರಾಜು ಬೆಂಗಳೂರು ನಗರ ಜಿಪಂ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರೆ, ಜೆಡಿಎಸ್ ನ ಪಾರ್ವತಿ ಚಂದ್ರಪ್ಪ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಜಿಪಂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಪರ 21 ಮತಗಳು ಚಲಾವಣೆಯಾಗಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಪರ 29 ಮತ ಚಲಾವಣೆಯಾಗಿದ್ದವು.
-ಉದಯವಾಣಿ