ಕರ್ನಾಟಕ

ಮೈಸೂರು-ಅಜ್ಮೀರ್ ಎಕ್ಸ್ ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ ಕರೆ!

Pinterest LinkedIn Tumblr

Mysoreಹುಬ್ಬಳ್ಳಿ:ಮೈಸೂರು ಅಜ್ಮೀರ್ ಎಕ್ಸ್ ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಬೆಳಗಾವಿ ಖಾನಾಪುರ ನಡುವೆ ರೈಲನ್ನು ಸ್ಥಗಿತಗೊಳಿಸಿ ತಪಾಸಣೆ ನಡೆಸಿದ ಘಟನೆ ಬುಧವಾರ ನಡೆದಿದೆ.

ಮುಂಬೈನಿಂದ ಹುಬ್ಬಳ್ಳಿ ಕಚೇರಿಗೆ ಅನಾಮಧೇಯ ಕರೆಯೊಂದು ಬಂದಿದ್ದು, ಮೈಸೂರು ಅಜ್ಮೀರ್ ರೈಲಿನಲ್ಲಿ ಬಾಂಬ್ ಇಡಲಾಗಿದೆ ಎಂದು ತಿಳಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಬೆದರಿಕೆ ಕರೆ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ದೇಸೂರು ಬಳಿ ರೈಲನ್ನು ನಿಲುಗಡೆಗೊಳಿಸಿ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Write A Comment