ಕರ್ನಾಟಕ

ಮೆಟ್ರೋದಲ್ಲಿ ಕನ್ನಡಿಗರಿಗೆ ಉದ್ಯೋಗಕ್ಕೆ ಮೆರವಣಿಗೆ

Pinterest LinkedIn Tumblr

karave

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಕನ್ನಡಕ್ಕೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗವಕಾಶ ನೀಡಬೇಕು ಎಂದು ಆಗ್ರಹಿಸಿ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಾಯಂಡಹಳ್ಳಿ ಮೆಟ್ರೊ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣದವರೆಗೆ ಮೆರವಣಿಗೆ ನಡೆಸಿದರು.

ಪರಿಷತ್ ಅಧ್ಯಕ್ಷ ಮಾಯಣ್ಣ ಮಾತನಾಡಿ, ಧ್ವನಿವರ್ಧಕಗಳಲ್ಲಿ ಮೆಟ್ರೋ ರೈಲಿನ ಆಗಮನ, ನಿರ್ಗಮನದ ಪ್ರಸಾರ, ಕನ್ನಡದಲ್ಲಿ ಫಲಕಗಳನ್ನು ಹಾಕಬೇಕು. ಕನ್ನಡ ಬಲ್ಲವರನ್ನು ಸಾರ್ವಜನಿಕ ಸಂಪರ್ಕಾಧಿಕಾರಿಯನ್ನಾಗಿ ನೇಮಿಸಬೇಕು. ಉದ್ಯೋಗದ ಎಲ್ಲ ಹಂತಗಳಲ್ಲೂ ಕನ್ನಡ ಬಲ್ಲವರಿಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.

ಕರ್ನಾಟಕದಲ್ಲಿ ಕನ್ನಡವೇ ಮೊದಲ ಆದ್ಯತೆಯಾಗಬೇಕು. ಮೆಟ್ರೋದಲ್ಲಿ ಸಂಚರಿಸುವವರು ಕನ್ನಡಿಗರೇ ಆಗಿರುವುದರಿಂದ ಇಲ್ಲಿ ಕನ್ನಡವನ್ನು ಮೊದಲು ಬಳಸಿ ಬಳಿಕ ಇತರ ಭಾಷೆಗೆ ಆದ್ಯತೆ ನೀಡಬೇಕು. ಆದರೆ ಇಲ್ಲಿ ಕನ್ನಡವನ್ನು ನಿರ್ಲಕ್ಷಿಸಲಾಗಿದೆ. ಎಲ್ಲಾ ಹುದ್ದೆಗಳನ್ನು ಬೇರೆ ರಾಜ್ಯದವರಿಗೆ ನೀಡಲಾಗಿದೆ. ಇದನ್ನು ಶೀಘ್ರವೇ ಸರಿಪಡಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

Write A Comment