ಕರ್ನಾಟಕ

ಸರ್ಕಾರಕ್ಕೆ ಶಾಕ್ : ವಿವಿ ಸ್ಥಾಪನೆ ಸುಗ್ರೀವಾಜ್ಞೆಗೆ ರಾಜ್ಯಪಾಲರ ನಿರಾಕರಣೆ

Pinterest LinkedIn Tumblr

vajubai

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಒಂದರ ಮೇಲೊಂದು ಶಾಕ್ ನೀ‌ಡುತ್ತಿರುವ ರಾಜ್ಯಪಾಲರು ಗ್ರಾಮೀಣ ವಿಶ್ವವಿದ್ಯಾಲಯ ಸ್ಥಾಪನೆಯ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ನಿರಾಕರಿಸಿದ್ದಾರೆ.

ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದಂತೆ ಅಧ್ಯಯನ ನಡೆಸಲು ಪ್ರತ್ಯೇಕ ಗ್ರಾಮೀಣ ವಿಶ್ವವಿದ್ಯಾಲಯ ಸ್ಥಾಪನೆಗಾಗಿ ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ಸುಗ್ರಿವಾಜ್ಞೆ ಹೊರಡಿಸುವ ತೀರ್ಮಾನ ಕೈಗೊಂಡು ಅದರಂತೆ ಸುಗ್ರಿವಾಜ್ಞೆಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಈ ಸುಗ್ರೀವಾಜ್ಞೆಗೆ ಸಹಿ ಹಾಕಲು ರಾಜ್ಯವಲಯ ನಿರಾಕರಿಸಿ, ನೂತನ ವಿಶ್ವವಿದ್ಯಾಲಯ ಸ್ಥಾಪನೆಗೆ ವಿಧಾನ ಮಂಡಲದಲ್ಲಿ ಕಾಯಿದೆ ಮಂಡಿಸಿ ಒಪ್ಪಿಗೆ ಪಡೆಯುವಂತೆ ಸೂಚಿಸಿದ್ದಾರೆ.

ರಾಜ್ಯಪಾಲರ ಈ ನ‌ಡೆಯಿಂದ ಈ ಶೈಕ್ಷಣಿಕ ವರ್ಷದಿಂದಲೇ ಗ್ರಾಮೀಣ ವಿಶ್ವವಿದ್ಯಾಲಯ ಸ್ಥಾಪಿಸುವ ಸರ್ಕಾರದ ಆಶಯಕ್ಕೆ ಕೊಡಲಿಪೆಟ್ಟು ಬಿದ್ದಿದೆ.

ಬಿಜೆಪಿ ಕಾಲದಲ್ಲಿ ತಾರಕಕ್ಕೇರಿದ್ದ ರಾಜಭವನ- ಸರ್ಕಾರದ ನಡುವಿನ ತಿಕ್ಕಾಟದ ಇತಿಹಾಸ ಈಗ ಮತ್ತೆ ಮರುಕಳಿಸಿದ್ದು, ಕೆಲ ದಿನಗಳ ಹಿಂದೆಯಷ್ಟೆ ರಾಜ್ಯಪಾಲ ವಜುಬಾಯ್ ರೂಢಬಾಯ್ ವಾಲಾ ನೂತನ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಎಸ್.ಆರ್. ನಾಯಕ್ ನೇಮಕ ಶಿಫಾರಸ್ಸನ್ನು ತಿರಸ್ಕರಿಸಿದ್ದರು. ಜೊತೆಗೆ 2-3 ದಿನಗಳ ಹಿಂದೆಯಷ್ಟೆ ಸರ್ಕಾರಿ ಗುತ್ತಿಗೆಗಳಲ್ಲಿ ಪರಿಶಿಷ್ಟ ವರ್ಗದವರಿಗೆ ಮೀಸಲಾತಿ ನೀಡುವ ಸರ್ಕಾರದ ತೀರ್ಮಾನಕ್ಕೆ ತಡೆ ಹಾಕಿದ್ದರು. ಈಗ ಪ್ರತ್ಯೇಕ ಗ್ರಾಮೀಣ ವಿ.ವಿ. ಸ್ಥಾಪನೆಯ ಸರ್ಕಾರದ ಕನಸಿಗೂ ಕಲ್ಲು ಬಿದ್ದಿದೆ.

ಪರಿಷತ್‌ನಲ್ಲಿ ಒಪ್ಪಿಗೆ ಸಿಗದ ಕಾರಣ ಸುಗ್ರಿವಾಜ್ಞೆ
ರಾಜ್ಯ ಸರ್ಕಾರ ಗ್ರಾಮೀಣ ವಿಶ್ವವಿದ್ಯಾಲಯ ರಚನೆಗೆ ನಿವೃತ್ತ ಮುಖ್ಯ ಕಾರ್ಯದರ್ಶಿ ರಂಗನಾಥ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿತ್ತು. ಜೊತೆಗೆ ಕಾಯಿದೆಯೊಂದನ್ನು ರೂಪಿಸಿ ವಿಧಾನಸಭೆಯಲ್ಲಿ ಮಂಡಿಸಿತ್ತು. ವಿಧಾನಸಭೆಯಲ್ಲಿ ಈ ಕಾಯಿದೆಗೆ ಒಪ್ಪಿಗೆ ಸಿಕ್ಕಿತ್ತು. ಆದರೆ ವಿಧಾನ ಪರಿಷತ್‌ನಲ್ಲಿ ಈ ಕಾಯಿದೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ಹಾಗಾಗಿ ಸರ್ಕಾರ ಈ ಶೈಕ್ಷಣಿಕ ವರ್ಷದಿಂದಲೇ ಗ್ರಾಮೀಣ ವಿ.ವಿ. ಸ್ಥಾಪನೆಗೆ ಸುಗ್ರಿವಾಜ್ಞೆ ಹೊರಡಿಸಿ, ರಾಜ್ಯಪಾಲರ ಸಹಿಗೆ ಕಳುಹಿಸಿತ್ತು.

Write A Comment