ಕರ್ನಾಟಕ

ಒವೈಸಿ ಕಾಲಿಗೆ ಬೀಳುವ ನಕಲಿ ಫೋಟೋ ಅಪ್ ಲೋಡ್ ಮಾಡಿದ ಯುವಕ ಸೆರೆ

Pinterest LinkedIn Tumblr

arrest

ಕೊಪ್ಪಳ: ಸಾಮಾಜಿಕ ಜಾಲತಾಣದಲ್ಲಿ ನಕಲಿ ಫೋಟೋ ಹಾಕುವುದು ಸಾಮಾನ್ಯವಾಗಿಬಿಟ್ಟಿದೆ. ಕೊಪ್ಪಳದ ಗಂಗಾವತಿಯ ಯುವಕನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರು ಆಲ್‌ ಇಂಡಿಯಾ ಮಜ್ಲಿಸ್-ಎ-ಇತ್ತೇಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷದ ಸಂಸದ ಅಸಾದುದ್ದೀನ್ ಒವೈಸಿ ಕಾಲಿಗೆ ಬಿದ್ದು ನಮಸ್ಕರಿಸುತ್ತಿರುವ ಚಿತ್ರವನ್ನು ತಯಾರಿಸಿ ಸಾಮಾಜಿಕ ಜಾಲತಾಣಕ್ಕೆ ಅಪ್ ಲೋಡ್ ಮಾಡಿದ್ದಾನೆ. ನಂತರ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಕೊಪ್ಪಳ ಮೂಲದ ಎಐಎಂಐಎಂ ಪಕ್ಷದ ಕಾರ್ಯಕರ್ತ ಮಹಮ್ಮದ್ ಮೆಹಬೂಬ್ ಎಂಬ ಯುವಕ ತನ್ನ ಫೇಸ್ ಬುಕ್ ಪುಟದಲ್ಲಿ ಮೋದಿ ಅವರು ಒವೈಸಿ ಕಾಲಿಗೆ ನಮಸ್ಕರಿಸುತ್ತಿರುವ ಚಿತ್ರವನ್ನು ಅಪ್ ಲೋಡ್ ಮಾಡಿದ್ದ.

ಚಿತ್ರ ವೈರಲ್ ಆಗುತ್ತಿದ್ದಂತೆ ಹಿಂದು ಜಾಗರಣ ವೇದಿಕೆ, ಬಿಜೆಪಿ ಕಾರ್ಯಕರ್ತರು ಮಹಮ್ಮದ್ ವಿರುದ್ಧ ದೂರು ನೀಡಿದ್ದರು. ದೂರಿನ ಪ್ರಕಾರ, ಗಂಗಾವತಿಯ ಪಟ್ಟಣ ಪೊಲೀಸರು ಮಹಮ್ಮದ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

Write A Comment