ಕರ್ನಾಟಕ

ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳ ಮಹಾಪೂರ

Pinterest LinkedIn Tumblr

deveಬೆಂಗಳೂರು, ಮೇ 18- ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಇಂದು ಹುಟ್ಟುಹಬ್ಬದ ಶುಭಾಶಯಗಳ ಮಹಾಪೂರವೇ ಹರಿದು ಬಂತು. ತಮ್ಮ 84ನೆ ಹುಟ್ಟುಹಬ್ಬದ ಅಂಗವಾಗಿ ದೇವೇಗೌಡರು ಕುಟುಂಬ ಸದಸ್ಯರೊಂದಿಗೆ ತಿರುಪತಿ ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದರು. ತಿರುಪತಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಪಾರ ಅಭಿಮಾನಿಗಳು ಗೌಡರಿಗೆ ಹೂಗುಚ್ಚ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದರು.

ಎಚ್‌ಎಎಲ್ ವಿಮಾನ ನಿಲ್ದಾಣದ ಬಳಿ ದೇವೇಗೌಡರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ದೇವೇಗೌಡರ ಪತ್ನಿ ಚನ್ನಮ್ಮ ದೇವೇಗೌಡರು ಕೂಡ ಈ ಹುಟ್ಟುಹಬ್ಬದ ಆಚರಣೆಯಲ್ಲಿ ಪಾಲ್ಗೊಂಡಿದ್ದರು. ಹಲವು ಕಾರ್ಯಕರ್ತರು ಮತ್ತು ಅಭಿಮಾನಿಗಳು ಹುಟ್ಟುಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು. ಬಳಿಕ ಪದ್ಮನಾಭನಗರದ ನಿವಾಸಕ್ಕೆ ಆಗಮಿಸಿ ಗೌಡರು ಅಲ್ಲಿಯೂ ಕೂಡ ಕೇಕ್ ಕತ್ತರಿಸುವ ಮೂಲಕ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡರು.

ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ.ರೇವಣ್ಣ, ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ, ಶಾಸಕರಾದ ಗೋಪಾಲಯ್ಯ ಸೇರಿದಂತೆ ಪಕ್ಷದ ಹಲವು ನಾಯಕರು ಮತ್ತು ಮುಖಂಡರು ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು. ಗೌಡರ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರಿಂದ ಹುಟ್ಟುಹಬ್ಬದ ಅಂಗವಾಗಿ ವಿವಿಧ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.

Comments are closed.