ಕರ್ನಾಟಕ

ಎಸಿಬಿಯಲ್ಲಿ ಸಿಎಂ ಸೇರಿದಂತೆ 28 ಸಚಿವರ ವಿರುದ್ಧ ದೂರು ದಾಖಲು

Pinterest LinkedIn Tumblr

vidhanasoudha

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ 28 ಸಚಿವರ ವಿರುದ್ಧ ದೂರು ದಾಖಲಾಗಿದೆ.

ಅಖಿಲ ಕರ್ನಾಟಕ ಪೊಲೀಸ್ ಮಹಾ ಸಂಘದ ಅಧ್ಯಕ್ಷ ವಿ. ಶಶಿಧರ್ ದೂರು ದಾಖಲಿಸಿದ್ದಾರೆ. ಪೊಲೀಸ್ ವರ್ಗಾವಣೆಯಲ್ಲಿ ಕಾನೂನು ಉಲ್ಲಂಘಿಸಲಾಗುತ್ತಿದ್ದು, ಅಕ್ರಮವಾಗಿ ವರ್ಗಾವಣೆ ಮಾಡಲಾಗುತ್ತಿದೆ. ಸಿಎಂ ಸೇರಿದಂತೆ 28 ಸಚಿವರು ಶಿಫಾರಸ್ಸು ಪತ್ರ ನೀಡಿದ್ದಾರೆ. ಇವರೆಲ್ಲರೂ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಶಿಫಾರಸ್ಸು ಪತ್ರ ನೀಡಿದ್ದಾರೆ ಎಂದು ಶಶಿಧರ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಇದೇ ಮೊದಲ ಬಾರಿಗೆ ಎಸಿಬಿಯಲ್ಲಿ ಇಷ್ಟು ದೊಡ್ಡ ಮಟ್ಟದ ದೂರು ದಾಖಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಜಯಚಂದ್ರ, ಸತೀಶ್ ಜಾರಕಿಹೊಳಿ, ಕೃಷ್ಣ ಭೈರೇಗೌಡ, ಖಮ್ಮರುಲ್ ಇಸ್ಲಾಂ, ಎಸ್.ಆರ್.ಪಾಟೀಲ್, ಎಚ್.ಕೆ. ಪಾಟೀಲ್, ಕಿಮ್ಮನೆ ರತ್ನಾಕರ್, ದಿನೇಶ್ ಗುಂಡೂರಾವ್, ಶ್ರೀನಿವಾಸ್ ಪ್ರಸಾದ್, ಶಾಮನೂರು ಶಿವಶಂಕರಪ್ಪ, ಪರಮೇಶ್ವರ್ ನಾಯಕ್, ರಮಾನಾಥ್ ರೈ, ಕೆ.ಜೆ.ಜಾರ್ಜ್, ಆರ್.ವಿ.ದೇಶಪಾಂಡೆ, ಉಮಾಶ್ರೀ, ಯು.ಟಿ.ಖಾದರ್, ಎಚ್.ಸಿ.ಮಹಾದೇವಪ್ಪ, ಬಾಬೂರ್ವ್ ಚಿಂಚನಸೂರ್, ಎಚ್.ಆಂಜನೇಯ, ಅಭಯಚಂದ್ರ ಜೈನ್, ಡಿ.ಕೆ.ಶಿವಕುಮಾರ್, ವಿನಯ್ ಕುಲಕರ್ಣಿ, ಶರಣು ಪ್ರಕಾಶ್ ಪಾಟೀಲ್, ಮಹಾದೇವ ಪ್ರಸಾದ್, ಎಂ.ಬಿ. ಪಾಟೀಲ್, ರಾಮಲಿಂಗಾರೆಡ್ಡಿ, ಅಂಬರೀಶ್, ವಿನಯ್ ಕುಮಾರ್ ಸೊರಕೆ ಸೇರಿದಂತೆ 28 ಸಚಿವರ ವಿರುದ್ಧ ದೂರು ದಾಖಲಾಗಿದೆ.

Comments are closed.