ಕರ್ನಾಟಕ

ಚುನಾವಣೆಯಲ್ಲಿ ಪ್ರಾಂತ್ಯೀಯ ಪಕ್ಷಗಳ ಪ್ರಾಬಲ್ಯ: ದೇವೇಗೌಡ

Pinterest LinkedIn Tumblr

deveಬೆಂಗಳೂರು: ಪಂಚ ರಾಜ್ಯಗಳ ವಿಧಾನಸಭೆಗೆ ನಡೆದ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಚುನಾವಣೆಯಲ್ಲಿ ಪ್ರಾಂತೀಯ ಪಕ್ಷಗಳೇ ಪ್ರಾಬಲ್ಯ ತೋರಿಸುತ್ತಿವೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ಫಲಿತಾಂಶ ಕುರಿತು ಮಾತನಾಡಿದ ದೇವೇಗೌಡರು, ಆಸ್ಸಾಂ ರಾಜ್ಯದಲ್ಲಿ ಬಿಜೆಪಿ ತನ್ನ ಸ್ವಂತ ಬಲದ ಮೇಲೆ ಅಧಿಕಾರ ಸ್ಥಾಪನೆ ಮಾಡುತ್ತಿದೆ. ಅಸ್ಸಾಂ ರಾಜ್ಯ ಹೊರತುಪಡಿಸಿ, ಉಳಿದೆಲ್ಲ ರಾಜ್ಯಗಳಲ್ಲಿ ಪ್ರಾಂತೀಯ ಪಕ್ಷಗಳ ಪ್ರಾಬಲ್ಯ ಮೆರೆಯುತ್ತೀವೆ ಎಂದು ಹೇಳಿದ್ದಾರೆ.

130 ವರ್ಷ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದ್ದು, ಐದು ರಾಜ್ಯಗಳಲ್ಲಿ ನಡೆದ ವಿಧಾನ ಸಭೆ ಚುನಾವನೆಯಲ್ಲಿ ಕಾಂಗ್ರೆಸ್ ಹಿನ್ನೆಡೆ ಅನುಭವಿಸಿದೆ. ಇದು ಮತದಾರ ನೀಡಿದ ತೀರ್ಪು ಎಂದು ಹೇಳಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು ಕೇರಳದಲ್ಲಿ ಎಡರಂಗದ ಮೈತ್ರಿಕೂಟದೊಂದಿಗೆ ಸೇರಿಕೊಂಡು 5 ಕ್ಷೇತ್ರಗಳ ಪೈಕಿ 3 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಂತಸ ವ್ಯಕ್ತಪಡಿಸಿದ್ದಾರೆ.

Comments are closed.