
ರಾಯಚೂರು: ರಾಜ್ಯದ ಹಲವೆಡೆ ಉತ್ತಮ ಮಳೆಯಾಗಿ ವಿದ್ಯುತ್ ಬೇಡಿಕೆ ಇಳಿಮುಖವಾಗಿದ್ದರಿಂದ ಆರ್ಟಿಪಿಎಸ್ ಬೃಹತ್ ಶಾಖೋತ್ಪನ್ನ ಕೇಂದ್ರದ ಮೂರು ಘಟಕಗಳನ್ನು ಗುರುವಾರ ಕೆಪಿಸಿ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಸ್ಥಗಿತಗೊಳಿಸಲಾಗಿದೆ.
ಕೇಂದ್ರದ 1, 5 ಮತ್ತು 6ನೇ ಘಟಕಗಳನ್ನು ಸ್ಥಗಿತಗೊಳಿಸಲಾಗಿದ್ದು, ಪ್ರಸ್ತುತ ಕೇಂದ್ರದ 5 ಘಟಕಗಳಿಂದ 858 ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. (2ನೇ ಘಟಕ 170 ಮೆವಾ, 3ನೇ ಘಟಕ 175 ಮೆವಾ, 4ನೇ ಘಟಕ 161 ಮೆವಾ, 7ನೇ ಘಟಕ 173 ಮೆವಾ, 8ನೇ ಘಟಕ 186 ಮೆವಾ.) ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಳದಿಂದ ಆರ್ಟಿಪಿಎಸ್ ಸೇರಿದಂತೆ ರಾಜ್ಯದಲ್ಲಿನ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳ ಮೇಲೆ ಹೆಚ್ಚಿನ ಒತ್ತಡ ಉಂಟಾಗಿತ್ತು.
ಪ್ರಸ್ತುತ ವಿದ್ಯುತ್ ಬೇಡಿಕೆ ಇಳಿಮುಖವಾಗಿದ್ದು, ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳ ಮೇಲಿನ ಒತ್ತಡ ಕಡಿಮೆಯಾಗಿರುವ ಕಾರಣ ಆರ್ಟಿಪಿಎಸ್ನ 3 ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾದಲ್ಲಿ ಘಟಕಗಳನ್ನು ಪುನಾರಂಭಿಸುವುದಾಗಿ ಆರ್ಟಿಪಿಎಸ್ ಮೂಲಗಳು ತಿಳಿಸಿವೆ.
Comments are closed.