ಕರ್ನಾಟಕ

ಸಮುದ್ರದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

Pinterest LinkedIn Tumblr

1-honey-beach-webಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಹನಿ ಬೀಚ್ನಲ್ಲಿ ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ.

ಹುಬ್ಬಳ್ಳಿಯ ಕೆ.ಎಲ್.ಇ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಮಹೇಶ್ ದೇಸಾಯಿ (22) ಮತ್ತು ರಾಹುಲ್ ಎಂ.ಸಿ. (22) ಮೃತಪಟ್ಟ ದುರ್ದೈವಿಗಳು. ಅಗ್ನಿಶಾಮಕ ದಳ ಮತ್ತು ಸ್ಥಳಿಯ ಮೀನುಗಾರರು ರಾಹುಲ್ನ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ಮಹೇಶ್ ಶವಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ಅಂಕೋಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.