ಕರ್ನಾಟಕ

ಭಯೋತ್ಪಾದನಾ ವಿರೋಧಿ ದಿನಾಚರಣೆ ಪ್ರತಿಜ್ಞಾವಿಧಿ ಬೋಧಿಸಿದ ಸಿಎಂ

Pinterest LinkedIn Tumblr

21A7clrಬೆಂಗಳೂರು, ಮೇ ೨೧- ಭಯೋತ್ಪಾದನಾ ವಿರೋಧಿ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸಿದ್ಧರಾಮಯ್ಯ ಅವರು ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು ಎಲ್ಲ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮರ್ಥದಿಂದ ಎದುರಿಸುತ್ತೇವೆಂಬ ಪ್ರತಿಜ್ಞೆಯನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಹೆಚ್.ಕೆ. ಪಾಟೀಲ್, ಕೆ.ಜೆ. ಜಾರ್ಜ್, ಹೆಚ್. ಆಂಜನೇಯ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾದವ್ ಸೇರಿದಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಹಾಗೂ ವಿವಿಧ ಇಲಾಖೆಯ ಉನ್ನತಾಧಿಕಾರಿಗಳು ಭಾಗವಹಿಸಿದ್ದರು.
ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಅವರ ಹತ್ಯೆಯಾದ ಹಿನ್ನೆಲೆಯಲ್ಲಿ ಆ ದಿನವನ್ನು ಭಯೋತ್ಪಾದನಾ ವಿರೋಧಿ ದಿನವನ್ನಾಗಿ ಆಚರಿಸಲಾಗುತ್ತಿದೆ.

Comments are closed.