ಕರ್ನಾಟಕ

ಮುಂಬರುವ ಜಿಂಬಾಬ್ವೆ ಕ್ರಿಕೆಟ್ ಪ್ರವಾಸಕ್ಕೆ ಮೂವರು ಕನ್ನಡಿಗರಿಗೆ ಸ್ಥಾನ

Pinterest LinkedIn Tumblr

kar crick

ಮುಂಬೈ: ಮುಂಬರುವ ಜಿಂಬಾಬ್ವೆ ಪ್ರವಾಸಕ್ಕೆ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಇದೇ ವೇಳೆ ಜುಲೈ- ಆಗಸ್ಟ್ನಲ್ಲಿ ನಡೆಯಲಿರುವ ವೆಸ್ಟ್ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೂ ತಂಡ ಪ್ರಕಟಿಸಲಾಗಿದೆ. ಜಿಂಬಾಬ್ವೆ ಪ್ರವಾಸ ಬೆಳೆಸಲಿರುವ ತಂಡದಲ್ಲಿ ಮೂವರು ಕನ್ನಡಿಗರು ಸ್ಥಾನ ಪಡೆದುಕೊಂಡಿದ್ದಾರೆ. ಆದರೆ ವಿರಾಟ್ ಜೊಹ್ಲಿ, ಶಿಖರ್ ಧವನ್ ಮತ್ತು ರೋಹಿತ್ ಶರ್ಮ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ಕರ್ನಾಟಕದ ಕೆ.ಎಲ್.ರಾಹುಲ್, ಕರುಣ್ ನಾಯರ್ ಮತ್ತು ಮನೀಷ್ ಪಾಂಡೆ ಅವರನ್ನು ಜಿಂಬಾಬ್ವೆ ಪ್ರವಾಸ ಬೆಳೆಸಲಿರುವ ತಂಡಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ಭಾರತ ತಂಡ ಜಿಂಬಾಬ್ವೆ ವಿರುದ್ಧ ಮೂರು ಏಕದಿನ, ಮೂರು ಟ್ವೆಂಟಿ20 ಪಂದ್ಯಗಳನ್ನಾಡಲಿದೆ. ಇನ್ನು ವೆಸ್ಟ್ಇಂಡೀಸ್ ಪ್ರವಾಸ ಬೆಳೆಸುವ ಟೆಸ್ಟ್ ತಂಡದಲ್ಲಿ ಕೆ.ಎಲ್.ರಾಹುಲ್ ಮತ್ತು ಸ್ಟುವರ್ಟ್ ಬಿನ್ನಿ ಇದ್ದಾರೆ.

ಸಂದೀಪ್ ಪಾಟೀಲ್ ನೇತೃತ್ವದ ಆಯ್ಕೆ ಸಮಿತಿ ಮುಂಬೈನಲ್ಲಿ ಸಭೆ ಸೇರಿ ತಂಡದ ಆಯ್ಕೆ ನಡೆಸಿತು.

ಜಿಂಬಾಬ್ವೆ ಪ್ರವಾಸಕ್ಕೆ ಭಾರತ ತಂಡ

ಮಹೇಂದ್ರ ಸಿಂಗ್ ಧೋನಿ (ನಾಯಕ), ಕೆ.ಎಲ್.ರಾಹುಲ್, ಫಿಯಾಜ್ ಫಝುಲ್, ಮನೀಶ್ ಪಾಂಡೆ, ಕರುಣ್ ನಾಯರ್, ಅಂಬಟಿ ರಾಯುಡು, ರಿಷಿ ಧವನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಧವಳ್ ಕುಲಕರ್ಣಿ, ಜಸ್ಪ್ರೀತ್ ಬುಪ್ರಾ, ಬರೀಂದರ್ ಸರಣ್, ಮನದೀಪ್ ಸಿಂಗ್, ಕೆದಾರ್ ಜಾದವ್, ಜಯದೇವ್ ಉನಾದ್ಕಟ್, ಯುಜ್ವೆಂದ್ರ ಚಾಹಲ್.

ಟೆಸ್ಟ್ ತಂಡದಲ್ಲಿ ಶಾರ್ದೂಲ್ ಠಾಕೂರ್

ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲು ಜುಲೈ-ಆಗಸ್ಟ್ನಲ್ಲಿ ವೆಸ್ಟ್ಇಂಡೀಸ್ ಪ್ರವಾಸ ಬೆಳೆಸಲಿರುವ ವಿರಾಟ್ ಕೊಹ್ಲಿ ನೇತೃತ್ವದ 17 ಮಂದಿ ಸದಸ್ಯರ ಟೆಸ್ಟ್ ತಂಡದಲ್ಲಿ ಮುಂಬೈನ ವೇಗಿ ಶಾರ್ದೂಲ್ ಠಾಕೂರ್ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಅಜಿಂಕ್ಯಾ ರಹಾನೆಗೆ ಉಪನಾಯಕನ ಜವಾಬ್ದಾರಿ ನೀಡಲಾಗಿದೆ. ಶಾರ್ದೂಲ್ಗೆ ಇದು ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯವಾಗಲಿದೆ.

ಟೆಸ್ಟ್ ತಂಡ: ವಿರಾಟ್ ಕೊಹ್ಲಿ (ನಾಯಕ), ಮುರಳಿ ವಿಜಯ್, ಶಿಖರ್ ಧವನ್, ಕೆ.ಎಲ್. ರಾಹುಲ್, ಚೇರೇಶ್ವರ ಪೂಜಾರ, ಅಜಿಂಕ್ಯಾ ರಹಾನೆ (ಉಪನಾಯಕ), ರೋಹಿತ್ ಶರ್ಮ, ವೃದ್ಧಿಮಾನ್ ಸಾಹ, ಆರ್.ಅಶ್ವಿನ್, ಅಮಿತ್ ಮಿಶ್ರಾ, ರವೀಂದ್ರ ಜಡೇಜಾ, ಇಶಾಂತ್ ಶರ್ಮ, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್, ಶಾರ್ದೂಲ್ ಠಾಕೂರ್, ಸ್ಟುವರ್ಟ್ ಬಿನ್ನಿ.

Comments are closed.