ಕರ್ನಾಟಕ

ಮಂಡ್ಯದಲ್ಲಿ ಪಂಚಾಯತ್ ಅಧ್ಯಕ್ಷನಿಂದ ಸಹಾಯಕಿ ಮೇಲೆ ಕಚೇರಿಯಲ್ಲೇ ಅತ್ಯಾಚಾರ ಯತ್ನ, ದೃಶ್ಯ ಸಿಸಿಟಿವಿಯಲ್ಲಿ ಸೆರೆ

Pinterest LinkedIn Tumblr

chandra

ಮಂಡ್ಯ: ಕಾಮುಕ ಗ್ರಾಮ ಪಂಚಾಯ್ತಿ ಅಧ್ಯಕ್ಷನೊಬ್ಬ ತನ್ನ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಡಿ ಗ್ರೂಪ್ ಮಹಿಳೆಯೊಬ್ಬರನ್ನು ಎತ್ತೊಯ್ದು ಕಚೇರಿಯಲ್ಲೇ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆಸ್ತೂರಿನಲ್ಲಿ ನಡೆದಿದೆ.

ಕೆಸ್ತೂರು ಗ್ರಾಪಂ ಅಧ್ಯಕ್ಷ ಚಂದ್ರಹಾಸ ತನ್ನ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ನಿನ್ನೆ ಸಂಜೆ 5ಗಂಟೆ ಸುಮಾರಿಗೆ ಕಚೇರಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಮಹಿಳೆ ಸುಮಾ ಅವರನ್ನು ತಡೆದ ಕಾಮುಕ ಅಧ್ಯಕ್ಷ, ಆಕೆಯನ್ನು ಬಲವಂತವಾಗಿ ಎತ್ತೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಮಹಿಳೆ ಹೇಗೊ ಚಂದ್ರಹಾಸನ ಅಟ್ಟಹಾಸದಿಂದ ತಪ್ಪಿಸಿಕೊಂಡು ಗ್ರಾಪಂ ಕಚೇರಿಯಿಂದ ಹೊರಗೆ ಓಡಿ ಹೋಗುವ ಮೂಲಕ ಕಾಮುಕ ಅಧ್ಯಕ್ಷನ ಬಲತ್ಕಾರದಿಂದ ತಪ್ಪಿಸಿಕೊಂಡಿದ್ದು, ಬಳಿಕ ಕೆಸ್ತೂರು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಂದು ಬೆಳಗ್ಗೆ ಗ್ರಾಪಂ ಅಧ್ಯಕ್ಷ ಚಂದ್ರಹಾಸನನ್ನು ಬಂಧಿಸಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಸಿಸಿ ಟಿವಿಯಲ್ಲಿ ಸೆರೆ:
ಗ್ರಾಪಂ ಕಚೇರಿಯಲ್ಲಿ ಸಿಸಿ ಟಿವಿ ಅಳವಡಿಸಲಾಗಿದ್ದು, ಅದರಲ್ಲಿ ಗ್ರಾಪಂ ಅಧ್ಯಕ್ಷ ಚಂದ್ರಹಾಸ ಮಹಿಳೆ ಮೇಲೆ ನಡೆಸಿರುವ ಲೈಂಗಿಕ ದೌರ್ಜನ್ಯ ದೃಶ್ಯ ಸೆರೆಯಾಗಿದೆ.

Comments are closed.