ಕರ್ನಾಟಕ

ನಾನು ಭಾರತದಲ್ಲಿ ಎಲ್ಲಿ ಬೇಕಾದರೂ ಸ್ಪರ್ಧಿಸುತ್ತೇನೆ : ವೆಂಕಯ್ಯನಾಯ್ಡು

Pinterest LinkedIn Tumblr

Venkaiah-Naidu

ಬೆಂಗಳೂರು: ನಾನು ಭಾರತದಲ್ಲಿ ಎಲ್ಲಿ ಬೇಕಾದರೂ ಸ್ಪರ್ಧಿಸುತ್ತೇನೆ. ರಾಜ್ಯಸಭೆ ಚುನಾವಣೆಯಲ್ಲಿ ಸ್ಪರ್ಧಿಸಬೇಕೇ ಬೇಡವೇ ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯನಾಯ್ಡು ಇಂದಿಲ್ಲಿ ಹೇಳಿದರು.

2ನೆ ವರ್ಷದ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭದಲ್ಲಿ ಆರ್‌ಎಸ್‌ಎಸ್ ಕೇಂದ್ರ ಕಚೇರಿ ಕೇಶವ ಕೃಪಾಗೆ ಭೇಟಿ ನೀಡಿದಾಗ ಕನ್ನಡ ಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು ನನ್ನ ಸ್ಪರ್ಧೆಗೆ ವಿರೋಧ ವ್ಯಕ್ತವಾಗುತ್ತಿದೆ. ನಾನು ಯಾವುದೇ ಪ್ರತಿಕ್ರಿಯೆ ನೀಡಲಾರೆ. ಯಾವಾಗ ನಾಮಪತ್ರ ಸಲ್ಲಿಸಬೇಕು ಎಂಬುದು ನಿರ್ಧಾರವಾಗಿಲ್ಲ ಎಂದರು.

ದೇಶದಲ್ಲಿ ಎಲ್ಲಿ ಬೇಕಾದರೂ ಸ್ಪರ್ಧಿಸಬಹುದಾಗಿದೆ ಎಂದು ಅವರು ಹೇಳಿದರು. ನಮ್ಮ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ವೆಂಕಯ್ಯನಾಯ್ಡು ತಿಳಿಸಿದರು. ಈ ಸಂದರ್ಭದಲ್ಲಿ ಆರ್‌ಎಸ್‌ಎಸ್ ಸಹ ಸರಸಂಘ ಚಾಲಕ ಮೈಚಾ ಜೈದೇವ್, ಸಂಸದ ಪಿ.ಸಿ.ಮೋಹನ್ ಸೇರಿದಂತೆ ಹಲವಾರು ಮುಖಂಡರ ಜೊತೆ ಚುನಾವಣೆ ಸ್ಪರ್ಧೆ ಕುರಿತಂತೆ ಚರ್ಚೆ ನಡೆಸಿದರು.

Comments are closed.